ಸರ್ಕಾರದ ಹಣ ನುಂಗಬೇಡಿ ಎಂದು ಸ್ಟೇಟಸ್​ ಹಾಕಿದ್ದಕ್ಕೆ ಕೊಂದೇ ಬಿಟ್ರಾ?; ಗ್ರಾಮ ಪಂಚಾಯತ್​ ಅಧ್ಯಕ್ಷನ ವಿರುದ್ಧ ಕೊಲೆ ಶಂಕೆ

Feature
ಉದಯ್ ಗಾಣಿಗ ಮತ್ತು ಪ್ರಾಣೇಶ್ ಯಡಿಯಾಳ್
Published on

ಉಡುಪಿ: ಸರ್ಕಾರದ ಹಣ ನುಂಗಬೇಡಿ ಎಂದು ಗ್ರಾಮಪಂಚಾಯತ್ ಅಧ್ಯಕ್ಷರೊಬ್ಬರ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ಗ್ರಾಮಸ್ಥನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಗ್ರಾಮಪಂಚಾಯತ್ ಅಧ್ಯಕ್ಷರು ಕೊಲೆ ಮಾಡಿರಬಹುದು ಎಂಬ ಅನುಮಾನವೂ ಮೂಡಿದೆ.

ಕುಂದಾಪುರ ತಾಲೂಕು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ವಿರುದ್ಧ ಕೊಲೆ ಶಂಕೆ ವ್ಯಕ್ತವಾಗಿದೆ. ಇವರು ಯಡಮೊಗೆ ಗ್ರಾಮದ ಉದಯ ಗಾಣಿಗ ಅವರನ್ನು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

ಗ್ರಾಮ ಪಂಚಾಯತ್ ಲಾಕ್​ಡೌನ್​ ಕುರಿತು ಎರಡು ದಿನಗಳ ಹಿಂದೆ ಸ್ಟೇಟಸ್ ಹಾಕಿದ್ದ ಉದಯ ಗಾಣಿಗ, ಗ್ರಾಮಸ್ಥರಿಗೆ ಪೂರಕ ವ್ಯವಸ್ಥೆ ಕಲ್ಪಿಸಿ ಊರಿಗೆ ಬೇಲಿ ಹಾಕಿ ಪೋಸು ಕೊಡಬೇಡಿ. ಕರೊನಾಪೀಡಿತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿ, ಆಮೇಲೆ ಪ್ರಚಾರ ತೆಗೆದುಕೊಳ್ಳಿ. ಸರ್ಕಾರದ ಧನಸಹಾಯವನ್ನು ನುಂಗಬೇಡಿ ಎಂದು ಬರೆದಿದ್ದರು.

ಉದಯ ಗಾಣಿಗ ಇಂದು ಸಂಜೆ ರಸ್ತೆಯಲ್ಲಿ ನಿಂತಿದ್ದಾಗ ಗ್ರಾಮ ಪಂಚಾಯತ್​ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಕಾರು ಡಿಕ್ಕಿ ಹೊಡೆದಿದೆ. ನಂತರ ಪ್ರಾಣೇಶ್ ಕಾರು ಬಿಟ್ಟು ಓಡಿ ಹೋಗಿದ್ದರು. ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಉದಯ ಗಾಣಿಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net