ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

ಹುಬ್ಬಳ್ಳಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿಯ ಗಳಗಿಹುಲಕೋಪ್ಪ ಗ್ರಾಮದಲ್ಲಿ ಸುನೀಲ್ ಮಾಂಗೋರೆ (40) ಎಂಬಾತನನ್ನು ಕೊಲೆ ಮಾಡಲಾಗಿದೆ.

ಮೃತ ಸುನೀಲ್​ ಹುಬ್ಬಳಿಯ ಅರವಿಂದ ನಗರ ನಿವಾಸಿ. ಈತನನ್ನು ಹುಬ್ಬಳ್ಳಿಯಿಂದ ಕರೆದುಕೊಂಡು ಹೋಗಿ ಕೊಲೆ ಮಾಡಿರುವ ದುಷ್ಕರ್ಮಿಗಳು ರಸ್ತೆ ಪಕ್ಕ ಎಸೆದಿದ್ದಾರೆ. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)