More

    ಖಾಲಿ ಕೊಡ ಹಿಡಿದು ಮುರೇಹಳ್ಳಿ ಗ್ರಾಮಸ್ಥರ ಪ್ರತಿಭಟನೆ

    ಬೇಲೂರು: ತಾಲೂಕಿನ ದೇವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರೇಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸಿ ಮಂಗಳವಾರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂಭಾಗ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

    ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಬದಲಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರು ಖಾಸಗಿ ವ್ಯಕ್ತಿಗಳಿಂದ ಬ್ಯಾರಲ್ ಒಂದಕ್ಕೆ 200 ರಿಂದ 300 ರೂ. ನೀಡಿ ನೀರು ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕಳೆದ 2019ರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕೊರೆದ ಕೊಳವೆ ಬಾವಿಗೆ ಇತ್ತೀಚೆಗೆ ಮೋಟಾರ್ ಅಳವಡಿಸಿದ್ದರೂ ಅಲ್ಲಿನ ನೀರು ಉಪಯೋಗಕ್ಕೆ ಬಾರದಂತಾಗಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಗ್ರಾಪಂ ವತಿಯಿಂದ ಶಾಶ್ವತವಾಗಿ ಶುದ್ಧ ಕುಡಿಯುವ ನೀರನ್ನು ಕೊಡುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

    ಗ್ರಾಮಸ್ಥರ ಮನವಿ ಆಲಿಸಿ ಮಾತನಾಡಿದ ತುಂಬುದೇವನಹಳ್ಳಿ ಗ್ರಾಪಂ ಅಧ್ಯಕ್ಷ ಟಿ.ಪಿ.ಮಲ್ಲೇಶ್ ಹಾಗೂ ಪಿಡಿಒ ವಾಸು, ಬರಗಾಲದಿಂದಾಗಿ ಅಂತರ್ಜಲ ಕುಸಿದಿರುವ ಕಾರಣ ಕೊಳವೆಬಾವಿ ಕೊರೆಸಿದರೂ ನೀರು ಬರುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಖಾಸಗಿ ವ್ಯಕ್ತಿಗಳಿಂದ ನೀರನ್ನು ಪಡೆದು ಗ್ರಾಮಸ್ಥರಿಗೆ ಉಚಿತವಾಗಿ ಕೊಡುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಪುಟ್ಟರಾಜು, ರವಿ, ಅವಿನಾಶ್, ಲೋಕೇಶ್, ಪುಟ್ಟರಾಜು, ಮೂರ್ತಿ, ನೂತೇಶ್, ಕೃಷ್ಣ, ಪಲ್ಲವಿ, ನೀಲಾ, ಯಮುನಾ, ಗಿರಿಜಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts