More

    ಸಾರಿಗೆ ನಿಗಮ ಮಂಡಳಿ ನಿರ್ದೇಶಕ ಸ್ಥಾನ ಒಲ್ಲೆ ಎಂದ ಮುರಿಗೆಪ್ಪ ಶೆಟ್ಟರ್

    ಬ್ಯಾಡಗಿ: ಮೂವತ್ತು ವರ್ಷಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಶ್ರಮಿಸಿದ್ದೇನೆ. ಚುನಾವಣೆ ಘೊಷಣೆಗೆ ಹತ್ತಾರು ದಿನಗಳು ಮಾತ್ರ ಉಳಿದಿದ್ದು, ಈ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕ ಮಂಡಳಿ ಅಧಿಕಾರೇತರ ಸ್ಥಾನ ನೀಡಿದ್ದು ಬೇಸರವಾಗಿದೆ. ಯಾವುದೇ ಕಾರಣಕ್ಕೂ ನಿರ್ದೇಶಕ ಸ್ಥಾನ ಸ್ವೀಕರಿಸುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಮುರಿಗೆಪ್ಪ ಶೆಟ್ಟರ್ ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಈ ಆದೇಶ ನನಗೆ ತೃಪ್ತಿಕರವಾಗಿಲ್ಲ. ನಾನು ಈ ಹಿಂದೆ ಎರಡು ಬಾರಿ ಶಾಸಕ, ಸಂಸದ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆಗ ಬೇರೆಯವರ ಹೆಸರು ಘೊಷಿಸಿದ ಪರಿಣಾಮ, ಪಕ್ಷದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಮೌನವಾಗಿದ್ದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು, ಮೂರು ದಶಕಗಳ ಕಾಲ ಪಕ್ಷಕ್ಕಾಗಿ ದುಡಿದ ನನಗೆ ನ್ಯಾಯ ಸಿಕ್ಕಿಲ್ಲ. ಪಕ್ಷದಲ್ಲಿ ಹಿರಿಯ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು. ನನಗೆ ಎಂಎಲ್​ಸಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೆ, ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿ.ಎಂ. ಉದಾಸಿ ಹಾಗೂ ಈಗಿನ ಮುಖ್ಯಮಂತ್ರಿಗಳು ನನ್ನ ಮನವಿಗೆ ಸ್ಪಂದಿಸಿಲ್ಲ. ಚುನಾವಣೆ ನೀತಿಸಂಹಿತೆ ಕೆಲದಿನಗಳಲ್ಲಿ ಘೊಷಣೆಯಾಗಲಿದೆ. ಇಂತಹ ಸಂದರ್ಭದಲ್ಲಿ ನನಗೆ ನಿರ್ದೇಶಕ ಸ್ಥಾನ ನೀಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ತಾವು ಸಾರಿಗೆ ನಿಗಮ ಮಂಡಳಿ ನಿರ್ದೇಶಕ ಸ್ಥಾನವನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts