More

    ಎನ್‌ಎಸ್‌ಎಸ್ ಘಟಕ ಉದ್ಘಾಟನೆ

    ನಾಪೋಕ್ಲು: ಸಮೀಪದ ಮೂರ್ನಾಡು ಪದವಿ ಕಾಲೇಜಿನಲ್ಲಿ 2023- 24ನೇ ಸಾಲಿನ ಎನ್‌ಎಸ್‌ಎಸ್ ಘಟಕವನ್ನು ಶುಕ್ರವಾರ ಉದ್ಘಾಟಿಸಲಾಯಿತು.

    ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚಿಟ್ಟಿರ ಜಿ.ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕ ಎಸ್.ಡಿ.ಪ್ರಶಾಂತ್ ಮಾತನಾಡಿದರು. ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ಎನ್‌ಎಸ್‌ಎಸ್ ಪ್ರತಿಜ್ಞಾವಿಧಿ ಬೋಧಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಕಲ್ಪನಾ ಪ್ರಾಸ್ತಾವಿಕ ನುಡಿಯನ್ನಾಡಿದರು. 2023-24ನೇ ಸಾಲಿನ ಮೊದಲ ಸೆಮಿಸ್ಟರ್‌ನ ಕಾಲೇಜಿನ ನ್ಯೂಸ್ ಲೆಟರ್‌ಅನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts