More

    ಆರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಮುರುಗದಾಸ್ ನಿರ್ಮಾಣದ ‘ಆಗಸ್ಟ್ 16, 1947’

    ಚೆನ್ನೈ: ತಮಿಳಿನ ಜನಪ್ರಿಯ ನಿರ್ದೇಶಕರ ಪೈಕಿ ಎ.ಆರ್​. ಮುರುಗದಾಸ್​ ಸಹ ಒಬ್ಬರು. ‘ಘಜನಿ’, ‘7 ಆಮ್ ಅರಿವು’, ‘ತುಪಾಕಿ’, ‘ಕತ್ತಿ’ ಮುಂತಾದ ಸೂಪರ್ ಹಿಟ್ ತಮಿಳು ಚಿತ್ರಗಳ ನಿರ್ದೇಶಕರಾದ ಎ.ಆರ್. ಮುರುಗದಾಸ್, ರಜನಿಕಾಂತ್​ ಅಭಿನಯದ ‘ದರ್ಬಾರ್’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಈ ಮಧ್ಯೆ, ಅವರು ವಿಜಯ್​ ಅಭಿನಯದಲ್ಲಿ ಒಂದು ಚಿತ್ರ ನಿರ್ಮಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಆ ಚಿತ್ರ ಸೆಟ್ಟೇರಲಿಲ್ಲ.

    ಇದನ್ನೂ ಓದಿ: ರಜನಿಕಾಂತ್​ ಅಭಿನಯದ ಹೊಸ ಚಿತ್ರಕ್ಕೆ ‘ಜೈ ಭೀಮ್​’ ನಿರ್ದೇಶಕರ ಆಕ್ಷನ್​-ಕಟ್​

    ಈಗ ಮುರುಗದಾಸ್​ ಸದ್ದಿಲ್ಲದೆ ‘ಆಗಸ್ಟ್ 16, 1947’ ಎಂಬಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ. ಹೆಸರು ಕೇಳಿದರೆ, ಇದು ಸ್ವಾತಂತ್ರ್ಯ ಸಂಗ್ರಾಮ ಕಥೆ ಇದ್ದಿರಬಹುದು ಎಂದನಿಸಬಹುದು. ಹೌದು, ಇದು ಸ್ವಾತಂತ್ರ್ಯ ಸಂಗ್ರಾಮದ ಕಥೆಯೇ. ಆದರೆ, ಇದುವರೆಗೂ ಯಾರೂ ಹೇಳದ ಮತ್ತು ತೋರಿಸದ ಒಂದು ವಿಭಿನ್ನ ಮತ್ತು ವಿಶೇಷ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆಯಂತೆ. ಬ್ರಿಟಿಷ್ ಸಾಮ್ರಾಜ್ಯದ ಎದುರು ಒಂದು ಸಣ್ಣ ಹಳ್ಳಿಯ ಜನ ತೊಡೆ ತಟ್ಟಿ ನಿಲ್ಲುವುದರ ಜೊತೆಗೆ, ಹೇಗೆ ನಿದ್ದೆ ಕೆಡಿಸಿದರು ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆಯಂತೆ.

    ‘ಆಗಸ್ಟ್ 16, 1947’ ಚಿತ್ರದಲ್ಲಿ ಗೌತಮ್ ಕಾರ್ತಿಕ್, ನವನಟಿ ರೇವತಿ, ಪುಗಳ್ ಸೇರಿದಂತೆ ಹಲವು ಪ್ರತಿಭಾವಂತ ನಟ-ನಟಿಯರು ಅಭಿನಯಿಸಿದ್ದಾರೆ.ಎನ್.ಎಸ್. ಪೊನ್ ಕುಮಾರನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್​ನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಏಪ್ರಿಲ್ 07ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

    ಇದನ್ನೂ ಓದಿ: ಚಂದನವನಕ್ಕೆ ದಿ ಗ್ರೇಟ್ ಖಲಿ ಎಂಟ್ರಿ; ‘ಕೆಂಡದ ಸೆರಗು’ ಚಿತ್ರದಲ್ಲಿ WWE ವರ್ಲ್ಡ್ ಚಾಂಪಿಯನ್ …

    ಪರ್ಪಲ್ ಬುಲ್ ಎಂಟರ್ಟೈನ್ಮೆಂಟ್ ಅರ್ಪಿಸಿ, ಎ.ಆರ್. ಮುರುಗದಾಸ್, ಓಂಪ್ರಕಾಶ್ ಭಟ್ ಮತ್ತು ನರಸೀರಾಮ್ ಚೌಧರಿ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

    ‘ಬಿಗ್​ ಬಿ’ ಅಮಿತಾಭ್​ ಬಚ್ಚನ್​ ಬಿಡುಗಡೆ ಮಾಡಿದರು ‘ಕಬ್ಜ’ ಚಿತ್ರದ ಟ್ರೇಲರ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts