'ಬೊಮ್ಮಾಯಿ ಸಿಎಂ ಆಗಿದ್ದು ಖುಷಿ ತಂದಿದೆ, ಅವರು ನನ್ನ ಸಹೋದರರಂತೆ' ಮುರುಗೇಶ್ ನಿರಾಣಿ

nirani
Published on

ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ. ಬೊಮ್ಮಾಯಿ ಅವರು ನನ್ನ ಸಹೋದರರಂತೆ. ಅವರು ಸಿಎಂ ಆಗಿರುವುದು ನಮಗೆ ಖುಷಿ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ಅವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ. ನಾನು ಅವರು ಒಂದೇ ಕಾಲೇಜಿನಲ್ಲಿ ಓದಿದವರು. ಅವರು ನನಗೆ ಸಹೋದರರಿದ್ದಂತೆ. ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ. ಒಂದು ಪರ್ಸೆಂಟ್ ಬೇಸರವೂ ನನಗಿಲ್ಲ ಎಂದು ನಿರಾಣಿ ಅವರು ಹೇಳಿದ್ದಾರೆ.

ಬೊಮ್ಮಾಯಿ ಅವರ ಸಂಪುಟದಲ್ಲಿ ನಿರಾಣಿ ಅವರಿಗೆ ಸ್ಥಾನವಿರುತ್ತದೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿರುವ ಅವರು, ಅದು ನನಗೆ ಗೊತ್ತಿಲ್ಲ. ಅದು ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ. ಸಂಪುಟದಲ್ಲಿ ಸ್ಥಾನ ಕೊಟ್ಟರೆ ಕೆಲಸ ಮಾಡುವೆ. ಇಲ್ಲವಾದರೆ ಪಕ್ಷಕ್ಕಾಗಿ ಕೆಲಸ ಮಾಡುವೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net