More

    ರಾಜ್ಯದ ಐದು ಕಡೆ ನಿರ್ಮಾಣವಾಗಲಿದೆ ವಿಮಾನ ನಿಲ್ದಾಣ: ಮುರುಗೇಶ್ ನಿರಾಣಿ

    ಕಲಬುರಗಿ: ರಾಜ್ಯದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಐದು ಕಡೆ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರ ನಡೆದ ಕೇಂದ್ರ ಸರ್ಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿಗೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ನಾಡಿಗೆ ಸಮರ್ಪಿಸಿದ್ದಾರೆ. ಹಾಸನ, ವಿಜಯಪುರ ವಿಮಾನ ನಿಲ್ದಾಣ ಕಾರ್ಯ ಭರದಿಂದ ಸಾಗಿದ್ದು, ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು. ಪ್ರಮುಖವಾಗಿ ದಾವಣಗೆರೆ, ಬಾಗಲಕೋಟ ಜಿಲ್ಲೆಯ ಬಾದಾಮಿ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕಮಗಳೂರದಲ್ಲಿ ವಿಮಾನ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: VIDEO| 3 ಅಡಿಯಿರೋ ಬಾಡಿಬಿಲ್ಡರ್ 4 ಅಡಿ ಎತ್ತರದ ವಧುವನ್ನು ಮದುವೆಯಾದ!

    ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪೂರಕವಾಗುವ ಮೆಗಾ ಟೆಕ್ಸ್​​ಟೈಲ್​ ಪಾರ್ಕ್​​ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಈ ಉದ್ಯಮ ಪ್ರಾರಂಭವಾದಲ್ಲಿ 25 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ದೊರಕಲಿದೆ ಎಂದು ತಿಳಿಸಿದರು.

    ಇದನ್ನೂ ಓದಿ: ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ; ಏಮ್ಸ್‌ ವೈದ್ಯರಿಂದ ಯಶಸ್ವಿ ಚಿಕಿತ್ಸೆ

    ವಾರದೊಳಗೆ ಪರಿಹಾರ ವಿತರಣೆ: ನೆಟೆರೋಗ ದಿಂದ ಹಾಳಾಗಿರುವ ತೊಗರಿಗೆ ಪರಿಹಾರ ಹಣ ವಾರದೊಳಗೆ ರೈತರ ಖಾತೆಗೆ ಜಮಾ ಆಗಲಿದೆ. ಹೆಕ್ಟೇರ್ ಗೆ 10 ಸಾವಿರ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಲ್ಲದೇ ಪರಿಹಾರ ಬಿಡುಗಡೆಗೆ ರಾಜ್ಯ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಹೀಗಾಗಿ ವಾರದೊಳಗೆ ಹಣ ರೈತರ ಕೈಗೆ ಸೇರಲಿದೆ ಎಂದು ಎಂದು ಹೇಳಿದರು.

    30 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು ಸಮೋಸಾ ಮಾರಾಟ ಮಾಡಿದ ದಂಪತಿ; ವಾರ್ಷಿಕ 45 ಕೋಟಿ ರೂ. ಗಳಿಸ್ತಿದಾರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts