More

    ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ನಾದಬ್ರಹ್ಮ ಹಂಸಲೇಖ ಚಾಲನೆ

    ಮೈಸೂರು: ನಾಡಹಬ್ಬ ದಸರಾಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಅಧಿಕೃತ ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 10.15 ರಿಂದ 10.36ಕ್ಕೆ‌ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ವಿಗ್ರಹಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮೂಲಕ ಹಂಸಲೇಖ ದಂಪತಿ ದಸರಾ ಹಬ್ಬಕ್ಕೆ ಚಾಲನೆ ಕೊಟ್ಟರು.

    ಬೆಳ್ಳಿಯ ರಥದಲ್ಲಿ ಪ್ರತಿಷ್ಠಾಪಿಸಿದ್ದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಈ ಬಾರಿಯ ವೈಭವದ ದಸರಾ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ ಸಿಕ್ಕಿದೆ. ನಾದಬ್ರಹ್ಮ ಡಾ ಹಂಸಲೇಖರು ಜ್ಯೋತಿ ಬೆಳಗಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಬಾರಿಯ ದಸರೆಗೆ ಮುನ್ನುಡಿ ಬರೆದರು.

    ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಮುನಿಯಪ್ಪ, ವೆಂಕಟೇಶ್, ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್​ ಸಿಂಹ, ಮೇಯರ್ ಶಿವಕುಮಾರ್, ಶಾಸಕರಾದ ಜಿ.ಟಿ. ದೇವೇಗೌಡ. ಜಿ. ಡಿ. ಹರೀಶ್ ಗೌಡ, ಅನಿಲ್ ಚಿಕ್ಕಮಾದು, ರವಿಶಂಕರ್, ಎ ಆರ್ ಕೃಷ್ಣಮೂರ್ತಿ ಸೇರಿ ಹಲವು ಗಣ್ಯರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

    ಇದನ್ನೂ ಓದಿ: ನಾಡಿನ ಹೆಮ್ಮೆಯ ಮೈಸೂರು ದಸರಾ ಉತ್ಸವಕ್ಕೆ ಎಲ್ಲರಿಗೂ ಆತ್ಮೀಯ ಆಮಂತ್ರಣ: ಸಿಎಂ ಸಿದ್ದರಾಮಯ್ಯ

    ತ್ರಿಮೂರ್ತಿಗಳ ಸಮಾಗಮ
    ದಸರಾ ಉದ್ಘಾಟನೆಯ ವೇಳೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪರಸ್ಪರ ತಬ್ಬಿಕೊಂಡು ಶುಭ ಕೋರಿದರು. ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಶಾಸಕ ತನ್ವೀರ್‌ಸೇಠ್ ಹಾಗೂ ಜೆಡಿಎಸ್ ಶಾಸಕ ಜಿಟಿ.ದೇವೇಗೌಡ ಪರಸ್ಪರ ಆಲಿಂಗನ ಮಾಡಿದರು.

    ಇಂದು ಅಧಿಕೃತ ಚಾಲನೆ ಸಿಗುತ್ತಿದ್ದಂತೆ ದಸರಾ ಕಾರ್ಯಕ್ರಮಗಳು ಇಂದಿನಿಂದ ಅ.24ರವರೆಗೆ ನಡೆಯಲಿವೆ. ತಾಯಿ ಚಾಮುಂಡೇಶ್ವರಿ ಪೂಜೆಯೊಂದಿಗೆ ಆರಂಭವಾಗುವ ದಸರಾ ಆಚರಣೆಯು ಜಂಬೂಸವಾರಿಯ ವೈಭವದ ಮೆರವಣಿಗೆ, ಪಂಜಿನ ಕವಾಯತಿನ ರೋಮಾಂಚನ ಸಾಹಸಗಳೊಂದಿಗೆ ಸಂಪನ್ನಗೊಳ್ಳುತ್ತದೆ. ಮುಂದಿನ 10 ದಿನಗಳ ಕಾಲ ಸಾಂಸ್ಕೃತಿಕ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

    ಬಿಗಿ ಭದ್ರತೆ
    ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಅ.24ರವರೆಗೂ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕೈಗೊಳ್ಳಲಾಗಿದೆ. ದಸರಾ ಕಾರ್ಯಕ್ರಮಗಳು ನಡೆಯಲಿರುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮೈಸೂರು ನಗರ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಓರ್ವ ಡಿಐಜಿ, 11 ಎಸ್ಪಿ, 410 ಪೊಲೀಸ್ ಅಧಿಕಾರಿಗಳು, 3778 ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 4200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಶಸ್ತ್ರ ಪಡೆಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಗರುಡ ಪಡೆ ಸಹ ನಿಯೋಜಿಸಲಾಗಿದೆ.

    ಬೆಳಗ್ಗೆಯಿಂದಲೇ ಅರಮನೆಯಲ್ಲಿ ನಡೆಯುತ್ತಿದೆ ಪೂಜಾ ಕೈಂಕರ್ಯಗಳು: ಕೆಲವೇ ಕ್ಷಣಗಳಲ್ಲಿ ನಾಡಹಬ್ಬಕ್ಕೆ ಅಧಿಕೃತ ಚಾಲನೆ

    ನಾಡಿನ ಹೆಮ್ಮೆಯ ಮೈಸೂರು ದಸರಾ ಉತ್ಸವಕ್ಕೆ ಎಲ್ಲರಿಗೂ ಆತ್ಮೀಯ ಆಮಂತ್ರಣ: ಸಿಎಂ ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts