ದೈಹಿಕ-ಮಾನಸಿಕ ಆರೋಗ್ಯಕ್ಕೆ ಸಹಕಾರಿ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಅನಿಸಿಕೆ

KREEDAKOOTA
ಮಸ್ಕಿಯ ಬಯ್ಯಪುರ ಮಹಾಂತಮ್ಮ ಲಿಂಗನಗೌಡ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಬಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಚಾಲನೆ ನೀಡಿದರು. ಪ್ರಮುಖರಾದ ಬಸಪ್ಪ ತನಿಖೆದಾರ, ಚನ್ನಬಸಪ್ಪ ಮೇಟಿ, ಪಿ ರಾಮಸ್ವಾಮಿ, ದಯಾನಂದ ಜೋಗಿನ್, ಬಾಲಸ್ವಾಮಿ, ಸಿದ್ದಾರಡ್ಡಿ ಗಿಣಿವಾರ, ವೀರೇಶ ಹೂಗಾರ, ಮೌನೇಶ ಹೊಸಮನಿ ಇತರರಿದ್ದರು.
Published on

ಮಸ್ಕಿ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯ ಎಂದು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಹೇಳಿದರು.

ಪಟ್ಟಣದ ಬಯ್ಯಪುರ ಮಹಾಂತಮ್ಮ ಲಿಂಗನಗೌಡ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಆಸಕ್ತಿಯನ್ನು ಶಿಕ್ಷಕರು ಗುರುತಿಸಬೇಕು. ವಿದ್ಯಾರ್ಥಿಗಳಿಗೆ ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೊತ್ಸಾಹ ನೀಡಿದರೆ ಮುಂದೆ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮುತ್ತಾರೆ ಎಂದರು.

ಪ್ರಭಾರ ಶಿಕ್ಷಣಾಧಿಕಾರಿ ಬಸಪ್ಪ ತನಿಖೆದಾರ ಮಾತನಾಡಿ, ಮಕ್ಕಳು ಪಠ್ಯದ ಜತೆಗೆ ಪಠ್ಯತೇರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಪ್ರತಿಭೆಯನ್ನು ಸಮಾಜಕ್ಕೆ ತೋರಿಸಲು ಮುಂದಾಗಬೇಕು ಎಂದರು.

ದೈಹಿಕ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮೇಟಿ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳಿಗೆ ಚನ್ನಾಗಿ ಆಟವಾಡುವದನ್ನು ಕಲಿಸಬೇಕು. ನಿರ್ಣಾಯಕರ ತೀರ್ಪಿಗೆ ಕ್ರೀಡಾಪಟುಗಳು ಮನ್ನಣೆ ನೀಡಿ ಸೋಲು-ಗೆಲವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.

ಸಿಆರ್‌ಪಿ ರಾಮಸ್ವಾಮಿ, ಮಲ್ಲಿಕಾರ್ಜುನ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ದಯಾನಂದ ಜೋಗಿನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಸ್ವಾಮಿ, ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ಮುಖ್ಯಗುರು ಸಿದ್ದಾರಡ್ಡಿ ಗಿಣಿವಾರ, ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ವೀರೇಶ ಹೂಗಾರ, ಮೌನೇಶ ಹೊಸಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net