ಲವ್​ ಜಿಹಾದ್​?!: ನೋಟ್ಸ್​ ನೆಪದಲ್ಲಿ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ

blank

ಕಲಬುರಗಿ: ನೋಟ್ಸ್​ ಕೇಳುವ ನೆಪದಲ್ಲಿ ಮುಸ್ಲಿಂ ಯುವಕನೊಬ್ಬ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಿಂದ ನೋಟ್ಸ್ ತೆಗೆದುಕೊಳ್ಳುವ ನೆಪವೊಡ್ಡಿದ ಯುವಕ ಆಕೆಯನ್ನು ತರಗತಿಯಿಂದ ಹೊರಗೆ ಬರುವಂತೆ ತಿಳಿಸಿದ್ದಾನೆ. ನೋಟ್ಸ್​ ಹಿಡಿದು ಹೊರ ಬಂದ ಯುವತಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ.

ಯುವತಿಯನ್ನು ಕಿಡ್ನಾಪ್​ ಮಾಡಿದ ಯುವಕ ಆಕೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾನೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಗೆ 16 ವರ್ಷ ವಯಸ್ಸಾಗಿದ್ದು, ಯುವತಿ 15 ವರ್ಷದವಳಾಗಿದ್ದಾಳೆ.

ಆರೋಪಿ ಮತ್ತು ಯುವತಿ ಬೆಂಗಳೂರಿನಲ್ಲಿರುವ ಮಾಹಿತಿ ಪಡೆದು ಬೆಂಗಳೂರಿಗೆ ತೆರಳಿದ ಅಫಜಲಪುರ ಪೊಲೀಸರು ಯುವತಿಯನ್ನು ರಕ್ಷಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕನ ವಿರುದ್ಧ ಪೋಸ್ಕೊ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. (ದಿಗ್ವಿಜಯ ನ್ಯೂಸ್​)

ಪತಿ, ಮಗಳ ಜತೆ ಹೋಳಿ ಆಚರಿಸಿಕೊಂಡ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೆಲ್ಫಿ ಪೋಟೋ ವೈರಲ್​

ಹುಲಿಯತ್ತ ವೃಷಭನ ಗಮನ: ರಾಜ್- ರಿಷಬ್ ಜೋಡಿಯ 2ನೇ ಪೋಸ್ಟರ್ ಬಂತು

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…