More

    ಮುಸ್ಲಿಂ ಸೌಹಾರ್ದ ಒಕ್ಕೂಟ ಪ್ರತಿಭಟನೆ

    ಶ್ರೀರಂಗಪಟ್ಟಣ: ಮುಸ್ಲಿಂ ಧರ್ಮ ಹಾಗೂ ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಿತ ಭಾಷಣ ಮಾಡಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಸ್ಲಿಂ ಸೌಹಾರ್ದ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವು.

    ಮುಸ್ಲಿಂ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಅಫ್ಸರ್ ಪಾಷಾ ಮಾತನಾಡಿ, ಹನುಮ ಸಂಕಿರ್ತನಾ ಯಾತ್ರೆ ವೇಳೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಧರ್ಮದ ಹಾಗೂ ಮಹಿಳೆಯರ ಬಗ್ಗೆ ಲಘು ಹೇಳಿಕೆ ನೀಡುವ ಜತೆಗೆ ಪ್ರಚೋದನಕಾರಿಯಾಗಿ ಭಾಷಣ ಮಾಡಿ ಕೋಮು ಸಂಘರ್ಷ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಇವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಮಾನ ಮನಸ್ಕರ ವೇದಿಕೆ ಮಹಿಳಾ ಹೋರಾಟಗಾರ್ತಿ ಅಮ್ರೀನ್ ತಾಜ್ ಮಾತನಾಡಿ, ಶ್ರೀರಂಗಪಟ್ಟಣದಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಎಲ್ಲ ಧರ್ಮ, ಜಾತಿ-ಜನಾಂಗದ ಜನರು ಅನ್ಯೋನ್ಯತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಹೊರಗಿನಿಂದ ಬಂದ ಜನರು ಇಲ್ಲದ ವಿವಾದ ಸೃಷ್ಟಿಸಿ ಇಲ್ಲಿನ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಇಂತಹ ಪ್ರಚೋದನೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಬಳಿಕ ಗ್ರೇಡ್-2 ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮುಸ್ಲಿಂ ಸೌಹಾರ್ದ ವೇದಿಕೆ ಗೌರವಾಧ್ಯಕ್ಷ ಇಲಿಯಾಸ್ ಅಹಮದ್, ಕಾರ್ಯದರ್ಶಿ ಅಬ್ದುಲ್ ಷೂಕೂರ್, ಖಜಾಂಚಿ ಅಯೂಬ್ ಷರೀಫ್, ಜನವಾದಿ ಸಂಘಟನೆಯ ದೇವಿ ಮತ್ತು ಮಂಜುಳಾ ಸೇರಿದಂತೆ ರೈತ ಹಾಗೂ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts