ಮುಸ್ಲಿಮರ ಜನಸಂಖ್ಯೆ ಏರಿಕೆ; ಇದು ನನಗೆ ರಾಜಕೀಯವಲ್ಲ.. ಜೀವನ ಮತ್ತು ಸಾವಿನ ವಿಚಾರ ಎಂದಿದ್ದೇಕೆ ಸಿಎಂ

ದಿಸ್ಪುರ್​: ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸುವುದು ನನಗೆ ದೊಡ್ಡ ಸಮಸ್ಯೆಯಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಬುಧವಾರ (ಜುಲೈ 17) ಹೇಳಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಪೋಸ್ಟ್ ಡಿಲೀಟ್​ ಮಾಡಿದ ಸಿಎಂ; ಸಚಿವರು ಕೊಟ್ಟ ಸ್ಪಷ್ಟನೆ ಏನು ಗೊತ್ತಾ?

ಈಶಾನ್ಯ ರಾಜ್ಯದ ಹೆಚ್ಚುತ್ತಿರುವ ಮುಸ್ಲಿಂ ಜನಸಂಖ್ಯೆಯ ಕುರಿತು ಮಾತನಾಡಿದ ಅವರು, ಅಸ್ಸಾಂನಲ್ಲಿ 1951ರಲ್ಲಿ ಶೇ.12ರಷ್ಟಿದೆ ಮುಸ್ಲಿಂ ಜನಸಂಖ್ಯೆಯು ಇಂದು ಶೇ.40 ರಷ್ಟು ತಲುಪಿದೆ. ಇದರಿಂದ ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇವೆ. ಇದು ನನಗೆ ರಾಜಕೀಯ ವಿಷಯವಲ್ಲ. ಇದು ನನಗೆ ಜೀವನ ಮತ್ತು ಸಾವಿನ ವಿಷಯವಾಗಿದೆ ಎಂದಿದ್ದಾರೆ.

ಅಲ್ಲದೆ ಅಸ್ಸಾಂ, ತ್ರಿಪುರಾ ಮತ್ತು ಬಂಗಾಳದಲ್ಲಿ ಜನಸಂಖ್ಯಾ ಬದಲಾವಣೆಗಳು ವೇಗವಾಗಿ ಸಂಭವಿಸುತ್ತಿವೆ. ಅಸ್ಸಾಂನ 12 ರಿಂದ 14 ಜಿಲ್ಲೆಗಳಲ್ಲಿ ಹಿಂದೂ ಸಮುದಾಯವು ಅಲ್ಪಸಂಖ್ಯಾತರಾಗಿದ್ದಾರೆ ಎಂದಿದ್ದಾರೆ. ಈ ಹಿಂದೆಯೂ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಅಸ್ಸಾಂನ ಧುಬ್ರಿಯಲ್ಲಿ ಗೆಲ್ಲಲು ಕೇಸರಿ ಪಕ್ಷಕ್ಕೆ ಇಷ್ಟವಿಲ್ಲ ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು.

ಶರ್ಮಾ ಅವರು ಜುಲೈ 1ರಂದು ಯಾವುದೇ ಸಮುದಾಯವನ್ನು ಉಲ್ಲೇಖಿಸದೆ ನಿರ್ದಿಷ್ಟ ಧರ್ಮದ ಜನರ ಒಂದು ವರ್ಗದ ಅಪರಾಧ ಚಟುವಟಿಕೆಗಳು ಕಳವಳಕಾರಿ ವಿಷಯ ಎಂದು ಹೇಳಿದ್ದರು. ಬಳಿಕ ತಮ್ಮ ಹೇಳಿಕೆಗಳು ಯಾವುದೇ ಒಂದು ಧರ್ಮಕ್ಕೆ ಮಾತ್ರ ಅಪರಾಧ ಎಂದು ಸೂಚಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜೂನ್ 23ರಂದು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಹೇಳಿದ್ದರು. ಅಲ್ಲದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯ ಮಾತ್ರ ಅಸ್ಸಾಂನಲ್ಲಿ ಕೋಮುವಾದದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.(ಏಜೆನ್ಸೀಸ್​​)

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…