More

    ರಾಹುಲ್ ಗಾಂಧಿಯ ಭರವಸೆಗಳು ಸೂರ್ಯಾಸ್ತದವರೆಗೂ ಉಳಿಯುವುದಿಲ್ಲ: ಅಮಿತ್​ ಷಾ ಟೀಕೆ

    ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದು ಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ವಾಗ್ದಾನ ಮಾಡಿದ್ದಾರೆ.

    ತೆಲಂಗಾಣದ ಭೋಂಗಿರ್‌ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಅಮಿತ್​ ಷಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಕಳೆದ ಬಾರಿ ಬಿಜೆಪಿ ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ತೆಲಂಗಾಣದಲ್ಲಿ ನಾವು 10ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಸಮೀಕ್ಷೆಗಳು ಹೇಳಿದ್ದು,  ಈ ಎರಡಂಕಿಯ ಅಂಕವು ಪ್ರಧಾನಿ ಮೋದಿಯನ್ನು 400 ಸ್ಥಾನಗಳನ್ನು ದಾಟುವಂತೆ ಮಾಡುತ್ತದೆ. ಈ ಚುನಾವಣೆಯು ಜಿಹಾದ್​ ಹಾಗೂ ಅಭಿವೃದ್ಧಿ ನಡುವಿನ ಯುದ್ಧವಾಗಿದೆ. ದಯವಿಟ್ಟು ತಲೆಂಗಾಣದ ಜನರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮೋದಿ ಅವರ ಮೋದಿ ಅವರ ಕೈ ಬಲಪಡಿಸಬೇಕು ಎಂದು ವಿನಂತಿಸಿದ್ದಾರೆ.

    ಇದನ್ನೂ ಓದಿ: ರಣವೀರ್​​-ದೀಪಿಕಾ ವಿಚ್ಛೇದನ ಪಡೆಯುತ್ತಿರುವುದು ನಿಜಾನಾ; ಉಂಗುರ ತೋರಿಸಿ ನಟ ಕೊಟ್ಟ ಸ್ಪಷ್ಟನೆ ಹೀಗಿದೆ

    ಕಳೆದ 10 ವರ್ಷಗಳಿಂದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸದೃಢ ಆಡಳಿತ ನಡೆಸಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮೀಸಲಾತಿಯನ್ನು ಕೊನೆಗಾಣಿಸುವುದಾಗಿ ಕಾಂಗ್ರೆಸ್ ಸುಳ್ಳುಗಳನ್ನು ಹಬ್ಬಿಸುತ್ತಿದೆ. ಆದರೆ, ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಸಿದುಕೊಂಡಿದ್ದು ಕಾಂಗ್ರೆಸ್‌ ಪಕ್ಷ. ಬಿಜೆಪಿ ಗೆದ್ದರೆ, ನಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

    ನಮ್ಮ ಪ್ರಣಾಳಿಕೆಯಲ್ಲಿ ನಾವು ಮೋದಿಯವರ ಭರವಸೆಗಳನ್ನು ನೀಡಿದ್ದೇವೆ. ಮೋದಿ ಹೇಳಿದ್ದನ್ನು ಅವರು ಮಾಡಿಯೇ ಮಾಡುತ್ತಾರೆ. ಆದರೆ, ರಾಹುಲ್ ಗಾಂಧಿಯ ಭರವಸೆಗಳು ಸೂರ್ಯಾಸ್ತದವರೆಗೂ ಉಳಿಯುವುದಿಲ್ಲ. ರಾಹುಲ್ ಗಾಂಧಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಮಾಡಲಿಲ್ಲ, ರೈತರಿಗೆ 15 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು ಆದರೆ ಈಡೇರಿಸಿಲ್ಲ. ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ಖಾತ್ರಿಯಿಲ್ಲದೆ 5 ಲಕ್ಷ ರೂ. ಸಾಲ ನೀಡುವುದಾಗಿ ಭರವಸೆ ನೀಡಿದರು, ಆದರೆ ಮಾಡಲಿಲ್ಲ. ಅವರು ಭರವಸೆ ನೀಡಿದಂತೆ ಅವರು ಹುಡುಗಿಯರಿಗೆ ಸ್ಕೂಟಿ ನೀಡಲಿಲ್ಲ ಮತ್ತು ಅವರು ಅಂತಾರಾಷ್ಟ್ರೀಯ ಶಾಲೆಗಳನ್ನು ತೆರೆಯಲಿಲ್ಲ ಎಂದು ಅಮಿತ್​ ಷಾ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts