ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಭ್ರಮದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ

ಶಿವಮೊಗ್ಗ: ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ. ಆದರೆ, ಮಹಿಳೆಯೊಬ್ಬರು ರಾಮನ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಅಲ್ಲಾಹು ಅಕ್ಬರ್ ಕೂಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ರಾಜ್ಯದಾದ್ಯಂತ ಬಿಜೆಪಿ ನಾಯಕರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದರಂತೆ ಶಿವಮೊಗ್ಗ ನಗರದಲ್ಲಿಯೂ … Continue reading ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಭ್ರಮದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ