20.4 C
Bengaluru
Sunday, January 19, 2020

ಪೌರತ್ವ ತಿದ್ದುಪಡಿ ಮಸೂದೆ ಕುರಿತು ಮುಸ್ಲಿಮರು ಭಯಪಡುವ ಅಗತ್ಯವಿಲ್ಲ: ಅಮಿತ್​ ಷಾ ಅಭಯ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಕುರಿತು ರಾಜ್ಯಸಭೆಯಲ್ಲಿ ಬುಧವಾರ ಚರ್ಚೆ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಗೃಹಸಚಿವ ಅಮಿತ್​ ಷಾ ದೇಶದಲ್ಲಿರುವ ಮುಸ್ಲಿಮರು ಮಸೂದೆ ಕುರಿತು ಭಯಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ಮಸೂದೆಯು ಮುಸ್ಲಿಂ ವಿರುದ್ಧವಾಗಿದೆ ಎಂದು ಅಪಪ್ರಚಾರ ನಡೆಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ. ಆದರೆ, ಇದು ಮುಸ್ಲಿಂ ವಿರುದ್ಧವಾಗಿಲ್ಲ. ನೆರೆ ದೇಶದ ಅಲ್ಪಸಂಖ್ಯಾತರಿಗಾಗಿ ಈ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದೆ. ಇದನ್ನು ದಾಖಲೆಯಲ್ಲಿ ಉಳಿಸಲು ನನಗೆ ಅವಕಾಶ ನೀಡಿ ಎಂದು ಷಾ ಪ್ರತಿಪಕ್ಷದ ನಾಯಕರಲ್ಲಿ ಮನವಿ ಮಾಡಿಕೊಂಡರು.

ಭಾರತದ ಮುಸ್ಲಿಮರು ಸುರಕ್ಷಿತವಾಗಿದ್ದಾರೆ. ಮುಂದೆಯೂ ಸುರಕ್ಷಿತವಾಗಿ ಉಳಿಯಲಿದ್ದಾರೆ. ಈ ಮೂಲಕ ಭಾರತೀಯ ಮುಸ್ಲಿಮರಲ್ಲಿ ಕೇಳಿಕೊಳ್ಳುವುದೇನೆಂದರೆ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಮಸೂದೆ ಕುರಿತು ಮುಸ್ಲಿಮರು ಭಯಪಡದೆ ನಿರಾತಂಕವಾಗಿರಿ ಎಂದು ಕರೆ ನೀಡಿದರು.

ನೆರೆ ದೇಶದ ಯಾರಿಗಾದರೂ ಪೌರತ್ವ ನೀಡುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳ ಸಂವಿಧಾನದಲ್ಲಿ ಇಸ್ಲಾಂ ಧರ್ಮವನ್ನು ಎತ್ತಿಹಿಡಿಯಲಾಗಿದೆ. ಹೀಗಾಗಿ ಆ ರಾಷ್ಟ್ರಗಳಲ್ಲಿ ಇತರೆ ಸಮುದಾಯಗಳಿಗಿಂತ ಮುಸ್ಲಿಂ ಸಮುದಾಯದವರು ಹಿಂಸೆಗೆ ಒಳಗಾಗುವುದಿಲ್ಲ. ನಮ್ಮಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮರಿಗೂ ಪೌರತ್ವ ನೀಡುವುದಾಗಿ ಕೆಲವರು ಹೇಳುತ್ತಿದ್ದಾರೆ. ವಿಶ್ವದಾದ್ಯಂತ ಇರುವ ಮುಸ್ಲಿಮರನ್ನು ನಮ್ಮ ಪ್ರಜೆಯನ್ನಾಗಿ ಮಾಡಬೇಕೆ? ಇದು ಹೇಗೆ ಸಾಧ್ಯ? ಒಂದು ದೇಶ ಈ ರೀತಿ ನಡೆದುಕೊಳ್ಳಲಿದಯೇ? ಎಂದು ಪ್ರಶ್ನಿಸುವ ಮೂಲಕ ಷಾ ಮಸೂದೆ ವಿರೋಧಿಸುವರಿಗೆ ತಿರುಗೇಟು ನೀಡಿದ್ದಾರೆ.

ಮಸೂದೆಯು ಮುಸ್ಲಿಮರನ್ನು ತಾರತಮ್ಯದಿಂದ ಕಾಣುತ್ತದೆ. ಹೀಗಾಗಿ ಸಂವಿಧಾನದಲ್ಲಿರುವ ಸಮಾನತೆ ಮತ್ತು ಜಾತ್ಯಾತೀತ ಸಿದ್ಧಾಂತದ ಉಲ್ಲಂಘನೆಯಾಗುತ್ತದೆ ಎಂದು ಪ್ರತಿಪಕ್ಷದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದರ ನಡುವೆಯೂ ಸೋಮವಾರ ಲೋಕಸಭೆಯಲ್ಲಿ 334 ಮತಗಳಿಂದ ಲೋಕಸಭೆಯಲ್ಲಿ ಮಸೂದೆ ಅಂಗೀಕೃತಗೊಂಡಿದೆ. 106 ಮತಗಳು ಮಸೂದೆಯ ವಿರುದ್ಧ ಬಂದಿದ್ದವು. ಇಂದು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ಕುರಿತು ವಿಸ್ತೃತ ಚರ್ಚೆಯಾಗುತ್ತಿದ್ದು, ತೀರ್ಮಾನ ಹೊರಬೀಳಬೇಕಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...