ಮುಂಗಾರು ವಿಳಂಬ; ಮಳೆಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

Pray
Published on

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಚರುಕುಗೊಂಡರೂ, ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ಬರಗಾಲದ ಭೀತಿ ಎದುರಾಗಿದೆ. ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲಿ ಎಂದು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.

ಬೆಳಗಾವಿಯ ಅಂಜುಮಾನ್ ಸಂಸ್ಥೆ ಬಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಲಾಗಿದೆ. ಪ್ರಾರ್ಥನೆ ವೇಳೆ ಸಾವಿರಾರು ಸಂಖ್ಯೆಲ್ಲಿ ಮುಸ್ಲಿಮರು ಪಾಲ್ಗೊಂಡಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡುಗಿಂತ ಕರಾವಳಿಯಲ್ಲಿ ಮುಂಗಾರು ಇನ್ನಷ್ಟು ಬಿರುಸುಗೊಂಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಜೂ 24ರಿಂದ 28ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ.

ಬೀದರ್, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜೂ 27ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ರಾಜ್ಯದಲ್ಲಿ ವಾಡಿಕೆಗಿಂತ ತಡವಾಗಿ ಆಗಮಿಸಿರುವ ಮುಂಗಾರು ಜೂ 18ರವರೆಗೆ ದುರ್ಬಲಗೊಂಡಿತ್ತು. ಇದರಿಂದಾಗಿ ಪ್ರಸಕ್ತ ತಿಂಗಳಲ್ಲಿ ಹೇಳಿಕೊಳುವಷ್ಟೂ ಮಳೆ ಬಿದ್ದಿಲ್ಲ. ಕೆಲವೆಡೆ ಮಾತ್ರ ಒಂದೆರೆಡು ದಿನಗಳು ಜೋರಾಗಿ ಬಿದ್ದರೆ, ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗಿತ್ತು. ಈಗ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net