More

    ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎಂದ ಲಾಲು ಪ್ರಸಾದ್; ಪ್ರಧಾನಿ ಮೋದಿ ಸೇರಿದಂತೆ ಹಲವರಿಂದ ಖಂಡನೆ

    ಪಟ್ನಾ: ದೇಶದಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 07) ನಡೆಯುತ್ತಿದ್ದು, ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರ ನಡುವೆಯೇ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್​ ಯಾದವ್​ ಸರ್ಕಾರಿ ಶಿಕ್ಷಣ ಸಂಸ್ಥೆ ಹಾಗೂ ಉದ್ಯೋಗದಲ್ಲಿ ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಬಿಹಾರದ ವಿಧಾನ ಪರಿಷತ್​ ಆವರಣದಲ್ಲಿ ಈ ಕುರಿತು ಮಾತನಾಡಿದ ಲಾಲು ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಿಜೆಪಿ ಬಯಸುತ್ತಿದೆ. ಬಿಜೆಪಿಯ ಉದ್ದೇಶವನ್ನು ಜನರು ತಿಳಿದಿದ್ದು, ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು ಎಂದು ಹೇಳಿದ್ದಾರೆ.

    ದೇಶಾದ್ಯಂತ ಜನರು ಬಹಳ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಇದನ್ನೂ ನೋಡಿ ಬಿಜೆಪಿಯವರು ಇಂಡಿಯಾ ಮೈತ್ರಿಕೂಟದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ದೇಶದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಪೂರಕವಾದ ವಾತಾವರಣವಿದ್ದು, ನಮ್ಮ ಗೆಲುವು ನಿಶ್ಚಿತ. ಇದನ್ನು ಕಂಡು ಭಯಭೀತರಾಗಿರುವ ಬಿಜೆಪಿಯವರು ಜನರನ್ನು ತಪ್ಪು ದಾರಿಗೆ ಎಳೆಯುವ ಮೂಲಕ ಪ್ರಚೋದಿಸುತ್ತಿದ್ದಾರೆ. ಹೀಗಾಗಿ ನಾವು ಮುಸ್ಲಿಮರಿಗೆ ಸರ್ಕಾರಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಂಪೂರ್ಣ ಮೀಸಲಾತಿ ನೀಡಬೇಕು ಎಂದು ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನ

    ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳುತ್ತಿದ್ದಾರೆ. ಅಂದರೆ ಒಬಿಸಿ, ಎಸ್​​ಸಿ, ಎಸ್​​ಟಿ ಸಮುದಾಯಗಳಿಗೆ ನೀಡಲಾಗಿದ್ದ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಕೇವಲ ವೋಟ್​ ಬ್ಯಾಕ್​ ರಾಜಕ್ಕಾರಣಕ್ಕಾಗಿ ಇವರೆಲ್ಲಾ ಹೀಗೇಕೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

    ಲಾಲು ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಲ್​ಜೆಪಿ ಸಂಸದ ಚಿರಾಗ್​ ಪಾಸ್ವಾನ್​, ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಬದಲು ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಯಾರಾದರೂ ಹೇಳಿದ್ದಾರಾ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವವನ್ನು ಕಿತ್ತುಕೊಂಡವರು ಈಗ ಅದನ್ನು ಉಳಿಸುವ ಮಾತನಾಡುತ್ತಿದ್ದಾರೆ. 2015 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಆರ್‌ಜೆಡಿ ಮತ್ತು ಕಾಂಗ್ರೆಸ್ ತಮ್ಮ ಚುನಾವಣಾ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಬಿಜೆಪಿ ಮೀಸಲಾತಿಯನ್ನು ರದ್ದುಪಡಿಸಲು ಬಯಸಿದೆ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಿತ್ತು ಎಂದು ಚಿರಾಗ್​ ಪಾಸ್ವಾನ್​ ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts