More

    ನಂದಿಹೊಸಳ್ಳಿ, ಯರೇಹಳ್ಳಿಯಲ್ಲಿ ಎಂಯುಎಸ್‌ಎಸ್

    ತರೀಕೆರೆ: ನಂದಿಹೊಸಳ್ಳಿ ಹಾಗೂ ಯರೇಹಳ್ಳಿಯಲ್ಲಿ ಎಂಯುಎಸ್‌ಎಸ್ ಸ್ಥಾಪನೆಗೆ ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಮೆಸ್ಕಾಂ ಇಇ ಎಂ.ಎಚ್.ಲಿಂಗರಾಜು ತಿಳಿಸಿದರು.
    ಮೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿದ್ದ ವಿದ್ಯುತ್ ಗ್ರಾಹಕರ ಮತ್ತು ಬಳಕೆದಾರರ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಅಕ್ರಮ-ಸಕ್ರಮ ಯೋಜನೆಯಲ್ಲಿ 1,846 ಅರ್ಜಿಗಳು ಸಲ್ಲಿಕೆಯಾಗಿದ್ದು, ಸರ್ಕಾರದ ಆದೇಶ ಬಂದ ಕೂಡಲೇ ಆದ್ಯತೆ ಅನುಸಾರ ಸಕ್ರಮ ಮಾಡಲಾಗುವುದು ಎಂದರು.
    ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಪರಮೇಶ್ವರಪ್ಪ ಮಾತನಾಡಿ, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ದನಿಗೂಡಿಸಿದ ಜಿಲ್ಲಾ ಸಹ ಕಾರ್ಯದರ್ಶಿ ಸುರೇಶಾಚಾರ್, ನಿರಂತರ ಜ್ಯೋತಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಆಗುತ್ತಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಮಕ್ಕಳ ಓದಿಗೆ ಅಡಚಣೆಯಾಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಬೇಕಾಬಿಟ್ಟಿ ಕಡಿತ ಮಾಡುತ್ತಿರುವುದರಿಂದ ವಾಣಿಜ್ಯ ಬೆಳೆ ಉಳಿಸಿಕೊಳ್ಳುವುದು ಸವಾಲಾಗಿದೆ ಎಂದರು.
    ಮೆಸ್ಕಾಂ ಇಇ ಲಿಂಗರಾಜು ಮಾತನಾಡಿ, ತಾಂತ್ರಿಕ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಇನ್ನು ಮುಂದೆ ಹಗಲು 3, ರಾತ್ರಿ 4 ತಾಸು ತ್ರೀೇಸ್ ವಿದ್ಯುತ್ ಪೂರೈಸಲಾಗುವುದು ಎಂದು ಭರವಸೆ ನೀಡಿದರು.
    ತಾಲೂಕಿನ ಅಲ್ಲಲ್ಲಿ ನಿರ್ಮಾಣವಾಗುತ್ತಿರುವ ಬಡಾವಣೆ ಮತ್ತು ಾರ್ಮ್ ಹೌಸ್‌ಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ನೀಡಬೇಕು. ಬೇಸಿಗೆಯಲ್ಲಿ ಸುಟ್ಟು ಹೋಗುವ ವಿದ್ಯುತ್ ಪರಿವರ್ತಕಗಳನ್ನು ತಕ್ಷಣವೇ ಕೊಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತರು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts