More

    18 ಗ್ರಾಪಂಗಳು ಬಿಜೆಪಿ ತೆಕ್ಕೆಗೆ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ವಿಶ್ವಾಸ

    ಮಸ್ಕಿ: ಕ್ಷೇತ್ರದ ಒಟ್ಟು 23 ಗ್ರಾಪಂಗಳ ಪೈಕಿ 18ರಲ್ಲಿ ಬಿಜೆಪಿ ಬೆಂಬಲಿತರು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕ್ಷೇತ್ರಕ್ಕೆ ಒಳಪಡುವ 23 ಗ್ರಾಪಂಗಳ 446 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 310ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ ಎಂದರು.

    2 ಗ್ರಾಪಂಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಮಬಲವಿದೆ. ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದುಕೊಂಡಿದೆ ಎಂದು ಕೈ ಮುಖಂಡರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ವಾಸ್ತವವಾಗಿ 2 ಅಥವಾ 3 ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ವಿಜೇತರು ಅಧಿಕಾರಕ್ಕೆ ಬರಬಹುದು ಎಂದರು.

    ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶೀ ಶರಣಬಸವ ಸೊಪ್ಪಿಮಠ ಇದ್ದರು.


    ಮಸ್ಕಿ ಕ್ಷೇತ್ರದ ಉಪಚುನವಾಣೆ ಜ.5 ರೊಳಗಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಬಸವಕಲ್ಯಾಣ ಕ್ಷೇತ್ರದ ಚುನಾವಣೆ ಜತೆಗೆ ಎಲೆಕ್ಷನ್ ನಡೆಯಬಹುದು. ಆದ್ದರಿಂದ ನಾವು ಈಗಾಗಲೇ ಉಪಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ವಿತ.
    | ಪ್ರತಾಪ್‌ಗೌಡ ಪಾಟೀಲ್, ಮಾಜಿ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts