ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುತ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು.ಮುಲ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173 ರ ಅಡಿ ಪ್ರಕರಣ ದಾಖಲಾಗಿದೆ.
ಉದ್ಯಮಿ ಮುತ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ
You Might Also Like
ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits
fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…
ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…
ಪೇನ್ ಕಿಲ್ಲರ್ ಮಾತ್ರೆ vs ಜೆಲ್… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel
Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…