More

    ರಾಜ್ಯದ 35 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ: ಮುಜರಾಯಿ ಇಲಾಖೆ

    ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ 35,000ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಭಕ್ತಾದಿಗಳಿಗೆ ತಿಳಿಸುವ ಸಲುವಾಗಿ ದೇವಾಲಯದ ಆಡಳಿತ ಮಂಡಳಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಇಲಾಖೆ ಆದೇಶಿಸಿದೆ.

    ಇದನ್ನೂ ಓದಿ: ಗದಗ ಜಿಲ್ಲೆಗೆ ಎಂ.ಪಿ. ಮಾರುತಿ ಸೇವೆ ಅನನ್ಯ: ಡಾ. ಬಸವರಾಜ ಧಾರವಾಡ

    ಇತ್ತೀಚೆಗೆ ದೇವಾಲಯಗಳಲ್ಲಿ ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಾಗಿದ್ದು, ಇದು ದೇವಾಲಯದ ಸಿಬ್ಬಂದಿ ಮತ್ತು ಇತರ ಭಕ್ತರಿಗೆ ತೊಂದರೆ ಉಂಟುಮಾಡುತ್ತದೆ. ಇದರಿಂದ ಜನರು ಆವರಣದೊಳಗೆ ಇರುವ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಲಾಗಿದೆ. ಮುಜರಾಯಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳು ಸಹಿ ಮಾಡಿರುವ ಆದೇಶದಲ್ಲಿ ದೇವಸ್ಥಾನದ ಫಲಕಗಳಲ್ಲಿ ಸಂದೇಶವನ್ನು ಪ್ರದರ್ಶಿಸಲು ಎಲ್ಲಾ ದೇವಾಲಯದ ಆಡಳಿತಾಧಿಕಾರಿಗಳಿಗೆ ವ್ಯವಸ್ಥೆ ಮಾಡುವಂತೆ ಕೋರಲಾಗಿದೆ.

    ಇನ್ನು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ದೇವಸ್ಥಾನದ ಆಡಳಿತವು ಈ ವಿಷಯಗಳ ಬಗ್ಗೆ ನಿರ್ಧರಿಸಲು ಮುಕ್ತ ಹಸ್ತವನ್ನು ಹೊಂದಿರಬೇಕು ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).

    ಸೂತಕದ ಸಂಪ್ರದಾಯ; ಬಾಣಂತಿಯನ್ನು ಊರಿನಿಂದ ಹೊರಗಿಟ್ಟ ಸಮುದಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts