More

    ‘ನನ್ನ ಜೀವನ ದೇಶಕ್ಕಾಗಿ ಮುಡಿಪು’; ಬಂಧನದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

    ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನಿನ್ನೆ (ಮಾ.21) ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿತು. ಈ ಹಿನ್ನೆಲೆ ಇಡಿ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಕೇಜ್ರಿವಾಲ್​ ಹಿಂಪಡೆದಿದ್ದಾರೆ.

    ಇದನ್ನೂ ಓದಿ: ವೈರಮುಡಿ, ರಾಜಮುಡಿ ಕಿರೀಟಗಳಿಗೆ ವಿಶೇಷ ಪೂಜೆ

    ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರನ್ನು ಇಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಾಗ ಮಾತನಾಡಿ, “ನನ್ನ ಜೀವನ ದೇಶಕ್ಕಾಗಿ ಮುಡಿಪಾಗಿದೆ” ಎಂದು ಹೇಳಿದ್ದಾರೆ. ಈ ಮಧ್ಯೆ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರನ್ನು ಈಗ ರದ್ದುಗೊಳಿಸಿರುವ ದೆಹಲಿ ಮದ್ಯ ನೀತಿ ಪ್ರಕರಣದ ಪ್ರಮುಖ ಆರೋಪಿ ಎಂದು 10 ದಿನಗಳ ಕಸ್ಟಡಿಗೆ ಒಳಪಡಿಸುವಂತೆ ಕೋರಿದೆ.

    ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಕೋರಿದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ಕೆಲವೇ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್​ರನ್ನು ಇಡಿ ಬಂಧಿಸಿದೆ. “ದೆಹಲಿ ಸಿಎಂ ಬಂಧನ ಭ್ರಷ್ಟಾಚಾರದ ಸೋಲಿನ ಸಂಕೇತ. ಈ ಕೂಡಲೇ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ಕೊಡಬೇಕು. ಕೇಜ್ರಿವಾಲ್ ಜೈಲಿನಿಂದ ಸರ್ಕಾರವನ್ನು ನಡೆಸುತ್ತಾರೆ ಎಂದು ಎಎಪಿ ಪಕ್ಷದ ನಾಯಕರು ಹೇಳುವುದು ಸಾಂವಿಧಾನಿಕ ನಿಯಮಗಳಿಗೆ ಅಪಮಾನವಾಗಿದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ,(ಏಜೆನ್ಸೀಸ್).

    ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

    ‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts