More

  ಮಲ್ಲಯ್ಯ ಕ್ಷೇತ್ರದ ಅಭಿವೃದ್ಧಿಗೆ ಒತ್ತು

  ಯಾದಗಿರಿ : ಕಲ್ಯಾಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಮೈಲಾಪುರ ಮಲ್ಲಯ್ಯನ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಹೇಳಿದರು.

  ಶುಕ್ರವಾರ ಮೈಲಾಪುರ ಗ್ರಾಮದಲ್ಲಿ ಮುಜರಾಯಿ ಇಲಾಖೆಯು ಮುಖ್ಯ ರಸ್ತೆಯಿಂದ ಗ್ರಾಮದವರೆಗೆ 1 ಕೋಟಿ ರೂ. ವೆಚ್ಚದಲ್ಲಿ ನಿಮರ್ಿಸಿದ ಸಿಸಿ ರಸ್ತೆ, 30 ಲಕ್ಷ ವೆಚ್ಚದ ಪ್ರಾಥಮಿಕ ಶಾಲೆಯ ಮೂರು ಕೋಣೆ ಹಾಗೂ 1.59 ಕೋಟಿ ರೂ. ವೆಚ್ಚದ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಮೈಲಾಪುರ ಅಭಿವೃದ್ಧಿಗೆ ಆದ್ಯತೆ ಕೊಡಲಾಗಿದೆ ಎಂದರು.

  ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣಗೌಡ ಕೂಡ್ಲೂರ, ರಾಚನಗೌಡ ಮುದ್ನಾಳ್, ಶ್ರೀನಿವಾಸರೆಡ್ಡಿ ಪಾಟೀಲ್ ಚನ್ನೂರ, ಶಾಂತಗೌಡ ಪಗಲಾಪುರ, ಸಿ.ಎಂ. ಪಾಟೀಲ್ ಇತರರಿದ್ದರು.

  ಇದಕ್ಕೂ ಮುನ್ನ ಪಗಲಾಪುರ ಗ್ರಾಮದಲ್ಲಿ ಸಿಸಿ ರಸ್ತೆ, ಅಂಗನವಾಡಿ ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು, ಇನ್ನೇನು ಕೆಲ ದಿನಗಳಲ್ಲಿ ಬೇಸಿಗೆ ಆರಂಭವಾಗಲಿದೆ. ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಜನರ ಜತೆ ಜಾನುವಾರುಗಳಿಗೂ ನೀರಿನ ತೊಂದರೆ ಆಗಬಾರದು. ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

  See also  ಸರ್ವೀಸ್ ರಸ್ತೆ ನಿರ್ಮಾಣಕ್ಕೆ ರೈತರ ಆಗ್ರಹ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts