ಹಸೆಮಣೆ ಏರಬೇಕಿದ್ದ ಯುವಕ ಸಾವು

ಮೈಸೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ನಗರದ ಹೂಟಗಳ್ಳಿಯ ಸೈಲೆಂಟ್ ಶೋರ್ ಬಳಿ ಗುರುವಾರ ರಾತ್ರಿ ನಡೆದಿದೆ.

ಹೂಟಗಳ್ಳಿಯ ಕೃಷ್ಣ(32) ಮೃತ ಯುವಕ. ಇವರು ಗುರುವಾರ ರಾತ್ರಿ 2 ಗಂಟೆ ಸುಮಾರಿನಲ್ಲಿ ಕೂರ್ಗಳ್ಳಿಯಿಂದ ಹೂಟಗಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಈ ವೇಳೆ ಕೃಷ್ಣ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೃಷ್ಣಗೆ ಮದುವೆ ನಿಶ್ಚಯವಾಗಿದ್ದು, ಇನ್ನು ಮೂರು ವಾರದಲ್ಲಿ ಸಾಂಸಾರಿಕ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ವಿಧಿಯಾಟಕ್ಕೆ ಕೃಷ್ಣ ಬಲಿಯಾಗಿದ್ದಾರೆ. ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.