ಕೆಎಸ್​ಆರ್​ಟಿಸಿ ಬಸ್​ ಪಲ್ಟಿ: ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​ ಹಳ್ಳಕ್ಕೆ ಬಿದ್ದು, ಐದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎಚ್.ಡಿ.ಕೋಟೆ ತಾಲೂಕಿನ ಯಶವಂತಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್​ ನಂಜನಗೂಡಿಗೆ ತೆರಳುತ್ತಿತ್ತು ಎನ್ನಲಾಗಿದೆ. ರಸ್ತೆಯನ್ನು ಹುರುಳಿ ಕಾಳು ಒಕ್ಕಣೆ ಸ್ಥಳವನ್ನಾಗಿ ಮಾಡಿಕೊಂಡಿರುವುದೇ ಅವಘಡಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕ ಬಸ್​ ಮಾರ್ಗ ಬದಲಿಸಿದ್ದಾನೆ ಎಂದು ದೂರಿದ್ದಾರೆ.

ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಎಚ್.ಡಿ. ಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ. (ದಿಗ್ವಿಜಯ ನ್ಯೂಸ್​)