More

    ಮೈಸೂರು ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಆಕ್ರೋಶ: ವಾರ್ಡ್- ಬೂತ್ ಅಧ್ಯಕ್ಷರು ರಾಜೀನಾಮೆಗೆ ಸಜ್ಜು

    ಮೈಸೂರು: ಮೈಸೂರು ಕಾಂಗ್ರೆನ್​ನಲ್ಲಿ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದ ಪ್ರಕರಣ ಸಂಬಂಧ ತನ್ವೀರ್ ಸೇಠ್​ರ ಮೂವರು ಬೆಂಬಲಿಗರ ಅಮಾನತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಆದೇಶ ಹೊರಡಿಸಿದ್ದಾರೆ.

    ಪಕ್ಷ ವಿರೋಧಿ ಚಟುವಟಿಕೆ ಅಡಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ ಶಿಫಾರಸಿನ ಮೇರೆಗೆ ತನ್ವೀರ್​ ಶಿಷ್ಯರಾದ ಕೆಪಿಸಿಸಿ ಸದಸ್ಯ ಪಿ.ರಾಜು, ಮೈಸೂರು ನಗರ ಡಿಸಿಸಿ ಸದಸ್ಯ ಅನ್ವರ್ ಪಾಷ, ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ್ ಶಾಹಿದ್ ಅವರನ್ನು ಪಕ್ಷದ ಸದಸ್ಯತ್ವದಿಂದ ಅಮಾನತಿಗೆ ಶಿಫಾರಸು ಮಾಡಿದ ಕೆಪಿಸಿಸಿ ನಡೆಗೆ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಅಜೀಜ್ ಸೇಠ್ ಬ್ಲಾಕ್​ನ ಎಲ್ಲ 9 ವಾರ್ಡ್ ಅಧ್ಯಕ್ಷರು ಮತ್ತು 141 ಬೂತ್ ಅಧ್ಯಕ್ಷರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಇದನ್ನೂ ಓದಿರಿ ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

    ತನ್ವೀರ್​ ಶಿಷ್ಯರ ಅಮಾನತಿಗೆ ಆದೇಶ ಬರುತ್ತಿದ್ದಂತೆ ಗರಂ ಆದ ತನ್ವೀರ್​ ಬೆಂಬಲಿಗರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕೆಪಿಸಿಸಿಗೆ ಎಚ್ಚರಿಸಿದ್ದಾರೆ. ಇಂದು ಬೆಳಗ್ಗೆ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಿಷ್ಠಾವಂತ ಕಾರ್ಯಕರ್ತರಿಗೆ ಅವಮಾನ ಮಾಡಿದ್ದಾರೆ. ಪರಿಶೀಲನೆ ನಡೆಸದೆ ಅಮಾನತು ಆದೇಶ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

    ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

    ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts