25.1 C
Bangalore
Friday, December 6, 2019

ನಗರ ಪಾಲಿಕೆಗೆ ಶೇ.50. 01ರಷ್ಟು ಮತದಾನ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಮೈಸೂರು: ನಗರ ಪಾಲಿಕೆಯ ಚುನಾವಣೆ ಕೆಲ ಸಣ್ಣಪುಟ್ಟ ಕಲಹ, ವಾಗ್ವಾದ ಹೊರತುಪಡಿಸಿ ಶಾಂತಿಯುತವಾಗಿ ನಡೆದರೂ, ನಾಗರಿಕರಿಂದ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದಲ್ಲಿ ಶೇ 50.01ರಷ್ಟು ಮತದಾನವಾಗಿದೆ.

ಕಳೆದ ಬಾರಿ ಶೇ 56.13 ಮತದಾನ ನಡೆದಿತ್ತು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.6 ರಷ್ಟು ಮತದಾನ ಕಡಿಮೆಯಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಇರುವ ವಾರ್ಡ್‌ಗಳಲ್ಲಿ ಮುಂಜಾನೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತದಾನ ನೀರಸವಾಗಿ ಕಂಡು ಬಂದರೂ, ಮಧ್ಯಾಹ್ನ 3 ಗಂಟೆ ನಂತರ ಜನರು ಗುಂಪು ಗುಂಪಾಗಿ ಆಗಮಿಸಿ ಮತದಾನ ಮಾಡಿದರು. ಮತಗಟ್ಟೆ ಬಳಿ ಮತದಾರರಿಗಿಂತ ಹೆಚ್ಚಾಗಿ ಅಭ್ಯರ್ಥಿಗಳ ಬೆಂಬಲಿಗರೇ ಹೆಚ್ಚು ಕಂಡು ಬಂದರು.

ಕೆಲ ಮತಗಟ್ಟೆಗಳಲ್ಲಿ ಮತದಾನಕ್ಕೆ ಬೆಳಗ್ಗೆಯಿಂದಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಮಹಾಜನ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಬೆಳಗ್ಗೆ 11ರವರೆಗೆ ಮಂದಗತಿಯ ಮತದಾನ ನಡೆಯಿತು. ಕೆ.ಆರ್ ಕ್ಷೇತ್ರದ ಜಯನಗರ, ವಿವೇಕಾನಂದನಗರ, ವಿದ್ಯಾರಣ್ಯಪುರಂ ಸೇರಿ ಬಹುತೇಕ ವಾರ್ಡ್‌ಗಳ ಮತಗಟ್ಟೆಗಳಲ್ಲಿ ನಿರೀಕ್ಷಿತ ಪ್ರಮಾಣದ ಮತದಾರರು ಕಂಡು ಬರಲಿಲ್ಲ. ಪಡುವಾರಹಳ್ಳಿ, ಒಂಟಿಕೊಪ್ಪಲು, ಕುಕ್ಕರಹಳ್ಳಿ, ಗಾಯತ್ರಿಪುರಂ, ಗಂಗೋತ್ರಿ ಬಡಾವಣೆ, ಉದಯಗಿರಿ ಮತಗಟ್ಟೆಗಳಲ್ಲಿ ಮತದಾರರು ಆಗಿಂದಾಗ್ಗೆ ಬಂದು ಮತ ಚಲಾಯಿಸಿದರು. ಎನ್.ಆರ್.ಕ್ಷೇತ್ರದ ಬಹುತೇಕ ವಾರ್ಡ್‌ಗಳ ಮತಗಟ್ಟೆಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು.

ಮತಯಂತ್ರ ದೋಷ : 64ನೇ ವಾರ್ಡ್ ಅರವಿಂದನಗರದ ಬೂತ್ ನಂ.11ರಲ್ಲಿ ಮತದಾನದ ಆರಂಭದಲ್ಲೇ ಮತಯಂತ್ರದಲ್ಲಿ ದೋಷ ಕಂಡು ಬಂತು. 11 ಜನ ಮತದಾನ ಮಾಡುತ್ತಿದ್ದಂತೆ ಸ್ಥಗಿತಗೊಂಡ ಮತಯಂತ್ರವನ್ನು ತಕ್ಷಣವೆ ಸಿಬ್ಬಂದಿ ಸರಿಪಡಿಸಲು ಮುಂದಾದರೂ ಅರ್ಧ ಗಂಟೆಯ ಬಳಿಕ ಮತಯಂತ್ರ ಸರಿಯಾಗಿ ಮತದಾನ ಸುಗಮವಾಗಿ ನಡೆಯಿತು. ಜಯನಗರ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲೂ ಮತಯಂತ್ರ ದೋಷ ಕಂಡು ಬಂತು. ಬೆಳಗ್ಗೆ 7.30ಕ್ಕೆ ಕಾಣಿಸಿಕೊಂಡ ದೋಷವನ್ನು ಸಿಬ್ಬಂದಿ ನಾಲ್ಕೈದು ನಿಮಿಷಗಳಲ್ಲಿಯೇ ಸರಿಪಡಿಸಿದರು.

ಜಣ ಜಣ ಕಾಂಚಾಣ: ಗೋಕುಲಂ ಕಾಂಟೂರ್ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಹಣ ಹಂಚುತ್ತಿದ್ದರು ಎಂಬ ಆರೋಪದ ಮೇಲೆ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 3.14 ಲಕ್ಷ ರೂ. ನಗದು, 3 ಜತೆ ಬೆಳ್ಳಿ ದೀಪ ಸೇರಿದಂತೆ ವಾಹನ ವಶಪಡಿಸಿಕೊಳ್ಳಲಾಗಿದೆ. ಗೋಕುಲಂನ ಜೆಡಿಎಸ್ ಅಭ್ಯರ್ಥಿ ಎಸ್.ಬಿ.ಎಂ. ಮಂಜು ಅವರಿಗೆ ಸೇರಿದ ವಸ್ತುಗಳು ಎಂದು ಹೇಳಲಾಗುತ್ತಿದ್ದು, ನಂಬರ್ ಬೋರ್ಡ್ ಇಲ್ಲದ ವಾಹನ ಮಾಲೀಕ ಯೋಗೇಶ್ ಮೇಲೆ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂಚುತ್ತಿದ್ದ ಕಾರ್ಯಕರ್ತರು ಸ್ಥಳದಿಂದ ಪರಾರಿಯಾಗಿದ್ದಾರೆ.

ಅಂಗವಿಕಲರು/ವೃದ್ಧರ ಉತ್ಸಾಹ: ಹೆಬ್ಬಾಳ, ಲಕ್ಷ್ಮೀಕಾಂತನಗರ, ಕುಕ್ಕರಹಳ್ಳಿ, ಜಯಲಕ್ಷ್ಮೀಪುರಂ, ಉದಯಗಿರಿ ಮುಂತಾದೆಡೆ ಸಾಮಾನ್ಯರಿಗಿಂತಲೂ ವೃದ್ಧರು, ಅಂಗವಿಕಲರು ಮತದಾನ ಮಾಡಲು ಉತ್ಸಾಹದಿಂದ ಆಗಮಿಸುತ್ತಿದ್ದರು.

ಮತಗಟ್ಟೆ ಬಳಿ ಮತಯಾಚನೆ, ವಾಗ್ವಾದ: ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರದ ಬಹುತೇಕ ವಾರ್ಡ್‌ಗಳ ಮತಗಟ್ಟೆಗಳ ರಸ್ತೆಯ ಎರಡು ಬದಿಗಳಲ್ಲಿ ನಿಂತ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳ ಅನುಯಾಯಿಗಳು ಮತ ಹಾಕಲು ಬರುವ ಜನರ ಮನವೊಲಿಸಲು ಮುಂದಾಗುತ್ತಿದ್ದರು. ಇನ್ನು ಇಂತಹ ವೇಳೆ ಆಗಾಗ್ಗೆ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕಂಡು ಬಂದರೂ, ಯಾವುದೇ ದೊಡ್ಡ ಮಟ್ಟದ ಗಲಾಟೆ ಆಗಲಿಲ್ಲ.

ಆದರೆ, ಎನ್.ಆರ್.ಕ್ಷೇತ್ರದ ವಾರ್ಡ್ 35 ಸಾತಗಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ-ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಗಲಾಟೆ ನಡೆದು, ಬಿಜೆಪಿ ಅಭ್ಯರ್ಥಿ ಸಾತ್ವಿಕ್, ಬಿಜೆಪಿ ಕಾರ್ಯಕರ್ತರಾದ ಗೋವಿಂದ್‌ರಾಜು, ಚರಣ್, ಲೋಹಿತ್, ಮಂಜು ಸೇರಿ 7 ಜನರ ಮೇಲೆ ಹಲ್ಲೆ ನಡೆದು ಸಣ್ಣಪುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...