More

    ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

    ಮೈಸೂರು: ಕೇಂದ್ರ ಸರ್ಕಾರ ಕಾರ್ಮಿಕ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿಪಿಐ ಹಾಗೂ ಸಿಪಿಎಂ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ಕೋಟೆ ಆಂಜನೇಯ ಸ್ವಾಮಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.

    ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಮಿಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಮತ್ತೊಂದೆಡೆ ಕೇಂದ್ರದ ನೀತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ನಿವೃತ್ತ ನೌಕರರಿಗೆ 10 ಸಾವಿರ ರೂ. ಪಿಂಚಣಿ ನೀಡಬೇಕು, 21 ಸಾವಿರ ರೂ. ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಪ್ರಮುಖರಾದ ಕೆ.ಬಸವರಾಜು, ಎಚ್.ಆರ್.ಶೇಷಾದ್ರಿ, ಜವರೇಗೌಡ, ಜಯರಾಮ್, ಜಗನ್ನಾಥ್, ಸುರೇಶ್ ಅರಸು, ದೇವದಾಸ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts