More

    ಮೈಸೂರು ದಸರಾ ಉದ್ಘಾಟಿಸ್ತಾರೆ ಸ್ಪೆಷಲ್​ ಪರ್ಸನ್ಸ್​, ಇದೇ ಈ ಬಾರಿಯ ವಿಶೇಷ

    ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕ ಆಚರಣೆಗೆ ಸೀಮಿತವಾಗಿದ್ದರೂ ವಿಶೇಷತೆ ಒಳಗೊಂಡಿದೆ. ವಿಶ್ಯವಿಖ್ಯಾತ ದಸರಾವನ್ನು ವಿಶೇಷ ವ್ಯಕ್ತಿಗಳು ಉದ್ಘಾಟಿಸಲಿದ್ದಾರೆ.

    ಅ.2ರ ಮಧ್ಯಾಹ್ನ 12ಕ್ಕೆ ದಸರಾ ಗಜಪಡೆ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಆಗಮಿಸಲಿದ್ದು, ಹಿಂದಿನಂತೆ ವೀರನ ಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ಇರುವುದಿಲ್ಲ. ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ಇರಲಿದೆ. ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದ್ದು, ಅಂದಿನ ಸಂದರ್ಭಕ್ಕೆ ತಕ್ಕಂತೆ ಎರಡು ಸಾವಿರ ಮಂದಿಗೆ ಅವಕಾಶ ನೀಡಲಾಗುತ್ತದೆ. ಇಲ್ಲದಿದ್ದರೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಯಲಿದೆ.

    ಇದನ್ನೂ ಓದಿರಿ ಮೈಸೂರು ದಸರಾ ಆನೆಗಳಿಗೂ ಕೋವಿಡ್‌ ಟೆಸ್ಟ್‌!

    ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ‌ ನಡೆಯಲಿದ್ದು, ಎಲ್ಲ ಕಾರ್ಯಕ್ರಮಗಳನ್ನೂ ಸಾಮಾಜಿಕ‌ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ‌ಅ.17ರ ಬೆಳಗ್ಗೆ 7.45 ರಿಂದ 8.15ರೊಳಗಿನ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದ್ದು, ಈ ಕಾರ್ಯಕ್ರಮವನ್ನು ಕರೊನಾ ವಾರಿಯರ್ಸ್​ ನೆರವೇರಿಸಿಕೊಡಲಿದ್ದಾರೆ. ಐವರು ಕರೊನಾ ವಾರಿಯರ್ಸ್​ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ. ಆ ಮೂಲಕ ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಮಹಾಮಾರಿ ಕರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ನಾಡಹಬ್ಬದಲ್ಲಿ ಗೌರವ ಸಲ್ಲಿಸಲಾಗುತ್ತಿದೆ. ಇದೇ ಈ ಬಾರಿಯ ದಸರಾ ವಿಶೇಷ.

    ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ವಯಸ್ಸಾಗಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಹಾಗಾಗಿ ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ. ಅಭಿಮನ್ಯು ಜತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ಜಂಬೂಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಈ ಬಗ್ಗೆ ಮೈಸೂರು ಅರಮನೆ ಮಂಡಳಿ ಕಚೇರಿಯಲ್ಲಿ ಶನಿವಾರ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ‌ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದರು.

    ಜಮೀರ್ ಹೇಳಿಕೆ ಬೆನ್ನಲ್ಲೇ ಶ್ರೀಲಂಕಾ ಪ್ರವಾಸದ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ!

    ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts