ನಾನು ಗೆದ್ದೇ ಗೆಲ್ಲುವೆ

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಖಾತೆ ತೆರೆಯಲಿದ್ದು, ನಾನು ಗೆದ್ದೇ ಗೆಲ್ಲುವೆ ಎಂದು ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್, ಜೆಡಿಎಸ್‌ನವರಿಗೆ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇತ್ತೀಚಿನ ಸಮೀಕ್ಷೆಗಳನ್ನು ಗಮನಿಸಿದರೆ ಅವುಗಳು ಸುಳ್ಳಾಗಿಲ್ಲ. ಹಾಗಾಗಿ ನನಗೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಲೀಡ್ ಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಮುನ್ನಡೆ ಸಾಧಿಸಲಿದ್ದು, ನರೇಂದ್ರಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಎಲ್ಲ ಸಮೀಕ್ಷೆಗಳು ಹೇಳಿವೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಚಾಮರಾಜನಗರದಲ್ಲಿ ಜನರು ನನ್ನ ಮೇಲೆ ಇಷ್ಟು ವರ್ಷಗಳ ಕಾಲ ಪ್ರೀತಿ ಇಟ್ಟಿರುವುದು ಸಾಬೀತಾಗಿದೆ ಎಂದರು.

ಮಂಡ್ಯದಲ್ಲಿ ಸುಮಲತಾ ಅಂಬರೀಶ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪಸಿಂಹ ಗೆಲುವು ನಿಶ್ಚಿತ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಗೆಲುವು ಅಷ್ಟು ಸುಲಭವಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡವಳಿಕೆಯನ್ನು ನೋಡಿರುವ ಜನತೆ ಈ ಚುನಾವಣೆಯಲ್ಲಿ ತಕ್ಕ ಫಲಿತಾಂಶ ನೀಡಲಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *