ಯುವಕರು ಸ್ವ-ಉದ್ಯೋಗ ಕೈಗೊಳ್ಳಲು ಸಲಹೆ

ಮೈಸೂರು: ಯುವ ಸಮುದಾಯ ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಬದುಕು ರೂಪಿಸುವ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಶಾಸಕ ಎಲ್. ನಾಗೇಂದ್ರ ಸಲಹೆ ನೀಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಸಣ್ಣ ಕೈಗಾರಿಕೆಗಳ ಉದ್ದಿಮೆದಾರರ ಸಂಘ, ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ದಿಮೆದಾರರ ಸಂಘದ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ 2018-19ನೇ ನೂತನ ಜವಳಿ ನೀತಿ ಅಡಿಯಲ್ಲಿ ಹಮ್ಮಿಕೊಂಡಿರುವ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಇದೆ. ಎಲ್ಲರಿಗೂ ಉದ್ಯೋಗ ಒದಗಿಸಲು ಸಾಧ್ಯವಿಲ್ಲ. ಹೀಗಾಗಿ ಯುವಜನರು ಸರ್ಕಾರದಿಂದ ದೊರೆಯುವ ಆರ್ಥಿಕ ನೆರವು, ಸವಲತ್ತುಗಳನ್ನು ಪಡೆದು ಸ್ವ ಉದ್ಯೋಗ ಪ್ರಾರಂಭಿಸಿ ಉತ್ತಮ ಬದುಕು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ. ಲಿಂಗರಾಜು, ಕೆಎಸ್‌ಎಫ್‌ಸಿ ಉಪ ಪ್ರಧಾನ ವ್ಯವಸ್ಥಾಪಕ ಗೋಪಾಲ್ ಭೈರಿ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವೆಂಕಟಾಛಲಪತಿ, ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಇತರರು ಇದ್ದರು.

Leave a Reply

Your email address will not be published. Required fields are marked *