21 C
Bengaluru
Thursday, January 23, 2020

ನಗರದಲ್ಲಿ ಅದ್ದೂರಿ ಹನುಮೋತ್ಸವ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೈಸೂರು: ಹನುಮ ಜಂಯಂತಿ ಅಂಗವಾಗಿ ವೇದಮಂತ್ರ ಪಠಣದ ನಡುವೆ ಜೈ ಶ್ರೀರಾಮ್, ಜೈ ಬಜರಂಗ ಬಲಿ ಘೋಷಣೆಯೊಂದಿಗೆ ನಗರದಲ್ಲಿ ಸೋಮವಾರ ಆಂಜನೇಯಸ್ವಾಮಿ ಮೂರ್ತಿ ಮೆರವಣಿಗೆ ಸಡಗರ-ಸಂಭ್ರಮದಿಂದ ಜರುಗಿತು.

ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಹನುಮ ಜಯಂತಿ ಮೆರವಣಿಗೆ ಪ್ರಯುಕ್ತ ನಗರದ ಬೀದಿಗಳು ಬಾವುಟ, ಬಂಟಿಂಗ್ಸ್‌ಗಳಿಂದ ತುಂಬಿ ಕೇಸರಿಮಯವಾಗಿದ್ದವು. ಅಲಂಕೃತ ರಥದಲ್ಲಿ ಮಾರುತಿ ಉತ್ಸವ ಮೂರ್ತಿಯನ್ನಿರಿಸಿ ಕಲಾತಂಡಗಳೊಂದಿಗೆ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಗಂಗೋತ್ರಿ ಬಡಾವಣೆಯ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಅಶೋಕ ರಸ್ತೆ, ಇರ‌್ವಿನ್ ರಸ್ತೆ, ನ್ಯೂ ಸಯ್ಯಜಿರಾವ್ ರಸ್ತೆ, ಡಿ.ದೇವರಾಜ ಅರಸು ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿರಸ್ತೆ, ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನಿಂದ ಕೆ.ಜಿ.ಕೊಪ್ಪಲು ರಸ್ತೆ ಮಾರ್ಗವಾಗಿ ಸರಸ್ವತಿಪುರಂನಲ್ಲಿರುವ ದೇವಾಲಯಕ್ಕೆ ತೆರಳಿತು.

ಮೆರವಣಿಗೆಯಲ್ಲಿ ನಂದಿಕಂಬ, ಬೀಸು ಕಂಸಾಳೆ, ವೀರಗಾಸೆ, ಡೊಳ್ಳುಕುಣಿತ, ಕೀಲು ಕುದುರೆ ತಂಡ, ಮರಗಾಲು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆಯ ಮೇಳ, ಸುತ್ತೂರು ಕಹಳೆ ತಂಡ, ತಮಟೆ, ನಗಾರಿ, ಜಡೆ ಕೋಲಾಟ, ಕರಗದ ನೃತ್ಯ, ಕರಗದ ಕೋಲಾಟ ಸೇರಿದಂತೆ 20ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿ ಗಮನ ಸೆಳೆದವು.
ಇದಕ್ಕೂ ಮುನ್ನ ಶಾಸಕ ಎಸ್.ಎ.ರಾಮದಾಸ್ ಹಾಗೂ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆಂಜನೇಯಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಗರ ಪಾಲಿಕೆ ಮಾಜಿ ಸದಸ್ಯ ನಂದೀಶ್ ಪ್ರೀತಮ್ ಇದ್ದರು.

ಹನುಮ ದೇಗುಲಗಳಲ್ಲಿ ವಿಶೇಷ ಪೂಜೆ:ಹನುಮ ಜಯಂತಿ ಅಂಗವಾಗಿ ನಗರದಾದ್ಯಂತ ಹನುಮ ದೇಗುಲಗಳಲ್ಲಿ ಸೋಮವಾರ ವಿಶೇಷ ಪೂಜೆ ನೆರವೇರಿತು.

ನಗರದ ಹಲವೆಡೆ ಇರುವ ಆಂಜನೇಯ ಮೂರ್ತಿಗೆ ವಿಶೇಷ ರುದ್ರಾಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನಡೆದರೆ, ಇನ್ನೂ ಕೆಲವೆಡೆ ಬೆಳಗ್ಗೆಯಿಂದಲೇ ಹೋಮ, ಅಭಿಷೇಕ ನಡೆದವು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಕುವೆಂಪುನಗರದಲ್ಲಿರುವ ಶ್ರೀವೀರ ಪ್ರಸನ್ನಸ್ವಾಮಿ ದೇಗುಲ, ಅಗ್ರಹಾರದ ಚಿಕ್ಕಾಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು. ಶಿವರಾಂಪೇಟೆಯ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಠದ ಶ್ರೀ ಕೃಷ್ಣಮೋಹನಾನಂದಗಿರಿ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ, ಅಭಿಷೇಕ ನಡೆಯಿತು.

ಹೆಬ್ಬಾಳದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ಸಂಕಲ್ಪ ಪೂಜೆ, ಹಾಲು, ಎಳನೀರು, ಮೊಸರು, ಪಂಚಾಮೃತ, ತುಪ್ಪ, ಜೇನುತುಪ್ಪ, ಸಕ್ಕರೆ, ಅರಿಶಿಣ-ಕುಂಕುಮದಿಂದ ಅಭಿಷೇಕ ನಡೆಸಲಾಯಿತು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...