

ನವದೆಹಲಿ: ರಾಜ್ಯದ ಸಾಂಸ್ಕೃತಿಕ ಹಾಗೂ ಅರಮನೆ ನಗರ ಎಂದೇ ಖ್ಯಾತಿಯಾಗಿರುವ ಮೈಸೂರಿಗೆ ತ್ಯಾಜ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ 5 ಸ್ಟಾರ್ ಗ್ರೇಡ್ ನೀಡಿದೆ.
ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಉತ್ತಮವಾಗಿ ಘನತ್ಯಾಜ್ಯ ನಿರ್ವಹಣೆ ಮಾಡಿದ ರಾಷ್ಟ್ರದ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಮೈಸೂರಿಗೆ ಪಂಚತಾರಾ ದರ್ಜೆ ದೊರೆತಿದೆ ಎಂದು ಸಂಸದ ಪ್ರತಾಪ್ಸಿಂಹ ಟ್ವೀಟ್ ಮಾಡಿದ್ದಾರೆ.
ಮನೆ ಬಾಗಿಲಿಗೆ ತೆರಳಿ ಕಸ ಸಂಗ್ರಹಿಸುವುದು, ಘನ ತ್ಯಾಜ್ಯ ನಿರ್ವಹಣೆ ಹಾಗೂ ನಗರವನ್ನು ಸ್ವಚ್ಛಗೊಳಿಸಿ ತ್ಯಾಜ್ಯ ಮುಕ್ತವಾಗಿಸಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಗ್ರೇಡ್ ದೊರೆತಿದೆ.
ಈಗಾಗಲೇ ಮೈಸೂರು ಹಲವು ಸ್ವಚ್ಛತೆಯಲ್ಲಿ ಹಲವು ಬಾರಿ ಪ್ರಥಮ ಸ್ಥಾನ ಪಡೆದಿದೆ. ಈಗ ಪಂಚತಾರಾ ದರ್ಜೆ ದೊರೆತು ಮತ್ತೊಂದು ಗರಿ ಮೂಡಿದೆ.