More

    ಕೆ.ಆರ್.ನಗರದಲ್ಲಿ ಕಾಂಗ್ರೆಸ್ ಗೆಲ್ಲಿಸಿ

    ಕೆ.ಆರ್.ನಗರ: ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು ಅದಕ್ಕೆ ಅಂತ್ಯವಾಡಲು ನಿಮ್ಮಗಳ ಜತೆ ಪಕ್ಷ ಮತ್ತು ನಾವಿದ್ದೇವೆ. ಮುಂದಿನ ಚುನಾವಣೆಯಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ನಿರಂತರವಾಗಿ ಶ್ರಮಿಸೋಣ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ರವಿಶಂಕರ್ ಹೇಳಿದರು.
    ಪಟ್ಟಣದ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
    ವಿಧಾನಸಭಾ ಚುನಾವಣೆಯ ನಂತರ ನಡೆದ ಪುರಸಭೆ ಮತ್ತು ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದಿಂದ ಪಕ್ಷಕ್ಕೆ ಬಹುಮತ ಪಡೆದಿದೆ. ಆ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಸಂದೇಶವನ್ನು ಮತದಾರರು ನೀಡಿದ್ದಾರೆ ಎಂದು ಹೇಳಿದರು.
    ತಾಲೂಕಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಬೇರೆ ಪಕ್ಷದವರು ದೌರ್ಜನ್ಯ ನಡೆಸುತ್ತಿದ್ದಾರೆ. ಅದಕ್ಕೆ ನಾವು ಜಗ್ಗದೆ ನಮ್ಮವರ ಬೆಂಬಲಕ್ಕಿದ್ದು ನ್ಯಾಯ ಕೊಡಿಸಲಾಗುತ್ತಿದೆ. 15 ವರ್ಷದಿಂದ ತಾಲೂಕಿನಲ್ಲಿ ಪಕ್ಷಕ್ಕೆ ಅಧಿಕಾರ ಇಲ್ಲದಿದ್ದರೂ ನಮ್ಮ ಕಾರ್ಯಕರ್ತರು ಬೇರೆಯವರ ಮನೆ ಬಾಗಿಲಿಗೆ ಹೋಗಿಲ್ಲ. ಇದು ಹೆಮ್ಮೆಯ ವಿಷಯವಾಗಿದ್ದು ಸದಾ ನಿಮ್ಮ ಕಷ್ಟ ಸುಖಗಳಿಗೆ ಭಾಗಿಯಾಗುತ್ತಾ ನಿಮ್ಮ ಜತೆ ಯಾವುದೇ ಹೋರಾಟಕ್ಕೆ ಬೆಂಬಲವಾಗಿರುತ್ತೇನೆ ಎಂದು ಭರವಸೆ ನೀಡಿದರು.
    ಹೈಕಮಾಂಡ್ ನಿರ್ದೇಶನದಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ತಾಲೂಕಿನ 41 ಕಡೆ ವೀಕ್ಷಿಸಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಮಾತನಾಡಿದರು.
    ನೇಮಕ: ಪದಗ್ರಹಣ ಕಾರ್ಯಕ್ರಮಕ್ಕೆ ಡಿಸಿಸಿಯಿಂದ ಕೆ. ಆರ್.ನಗರ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಉಸ್ತುವಾರಿಗಳಾಗಿ ಹೇಮಂತ್‌ಕಲ್ಲಹಳ್ಳಿ, ಸರಿತಾ ಜವರಪ್ಪ, ಶ್ರೇಯಸ್, ಪುನೀತ್‌ಕುಮಾರ್, ಮೋಹನ್ ಅವರನ್ನು ನೇಮಕ ಮಾಡಲಾಯಿತು.
    ಕೆಪಿಸಿಸಿ ಉಸ್ತುವಾರಿ ಅಶ್ವಿನ್‌ಕುಮಾರ್ ರೈ, ಸದಸ್ಯ ಎಸ್.ಪಿ.ತಮ್ಮಯ್ಯ, ತಾಪಂ ಅಧ್ಯಕ್ಷ ಎಂ.ನಾಗರಾಜ್ ಮಾತನಾಡಿದರು. ತಾಪಂ ಸದಸ್ಯ ಕೆ.ಪಿ.ಯೋಗೇಶ್, ಡಿಸಿಸಿ ಸದಸ್ಯ ಜಿ.ಆರ್.ರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯ ಶಂಕರ್, ವಕ್ತಾರ ಸೈಯದ್ ಜಾಬೀರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts