ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಆದ್ಯತೆ ಸಿಗಲಿ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಕಾಂಗ್ರೆಸ್ ಮುಖಂಡರಿಂದ ಮಹಿಳೆಯರ ಅಭಿಪ್ರಾಯ ಸಂಗ್ರಹ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡುವ ಪ್ರಣಾಳಿಕೆಯಲ್ಲಿ ಮಹಿಳೆಯರ ಧ್ವನಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ.

ಈ ನಿಟ್ಟಿನಲ್ಲಿ ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಮುಖಂಡರು ವಿವಿಧ ಮಹಿಳೆಯರ ಅಭಿಪ್ರಾಯ ಆಲಿಸಿದರು.
ಕಾಂಗ್ರೆಸ್ ಮುಖಂಡರು ದೇಶದ ವಿವಿಧ ಭಾಗಗಳಿಗೆ ತೆರಳಿ ಎಲ್ಲ ವರ್ಗದ ಮಹಿಳೆಯರನ್ನು ಭೇಟಿಯಾಗಿ ಅವರ ಸಮಸ್ಯೆ, ಮನವಿ ಗಳನ್ನು ಆಲಿಸಿ ನಂತರ ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳನ್ನು ಸೇರ್ಪಡೆಗೊಳಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನ ಮೇರೆಗೆ ಮಹಿಳೆಯರ ಮನವಿ ಆಲಿಸುವ ‘ಜನ ಧ್ವನಿ’ ವಿಶೇಷ ಕಾರ್ಯಕ್ರಮವನ್ನು ದೇಶವ್ಯಾಪಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಣಾಳಿಕೆ ಸಮಿತಿ ಸಂಯೋಜಕ ರಾಜೀವ್‌ಗೌಡ ಹೇಳಿದರು.

ಒಡನಾಡಿ ಸೇವಾಸಂಸ್ಥೆಯ ಕುಮುದಿನಿ ಮಾತನಾಡಿ, ಮಹಿಳೆಯರ ದುಡಿಮೆಗೆ ತಕ್ಕ ವೇತನ ದೊರೆಯುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಯಾಗಬೇಕು. ಪ್ರಸ್ತುತ ನೀಡುತ್ತಿರುವ ಹೆರಿಗೆ ರಜೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಲೈಂಗಿಕ ಶಿಕ್ಷಣವನ್ನು ಪಠ್ಯದಲ್ಲಿ ಅಳವಡಿಸಬೇಕು ಹಾಗೂ ಮಹಿಳೆಯರಲ್ಲಿ ಕಾನೂನಿನ ಅರಿವು ಹೆಚ್ಚಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿದರು.

ಶಿಕ್ಷಣ ತಜ್ಞರಾದ ಪ್ರೊ.ಶಾಲಿನಿ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಉದ್ಯೋಗಕ್ಕೆ ಸೇರುತ್ತಿರುವ ಮಹಿಳೆಯರ ಪ್ರಮಾಣ ತೀರಾ ಕಡಿಮೆ. ಮಹಿಳೆಯರು ಹೆಚ್ಚು ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಆಗಬೇಕು ಹಾಗೂ ಮಹಿಳೆಯರಿಗೆ ರಾಜಕೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಶ್ರಮಿಸಬೇಕೆಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಪ್ರೊ.ಇಂದಿರಾ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಸ್ಥಾನಮಾನ ನೀಡುವ ವಿಚಾರ ಮಾತಿಗೆ ಸೀಮಿತವಾಗಬಾರದು. ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭ ಟಿಕೆಟ್ ನೀಡುವಾಗ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ಡಾ.ಸುಜಾತಾ ರಾವ್ ಮಾತನಾಡಿ, ಮಹಿಳೆಯರು ಹಲವು ಆರೋಗ್ಯ ಸಮಸ್ಯೆಯನ್ನು ನಿರಂತವಾಗಿ ಎದುರಿಸುತ್ತಿರುತ್ತಾರೆ. ಹೀಗಾಗಿ ಮಹಿಳೆಯರ ಆರೋಗ್ಯ ವೃದ್ಧಿಗೆ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ರಶ್ಮಿ ಮಾತನಾಡಿ, ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳು ಬೆಂಗಳೂರು, ದೆಹಲಿಗೆ ಸೀಮಿತವಾಗಿವೆ. ಆದರೆ, ಹೆಣ್ಣು ಮಕ್ಕಳನ್ನು ಸಾಕಷ್ಟು ಪಾಲಕರು ಅಷ್ಟೊಂದು ದೂರ ಕಳುಹಿಸುವುದಿಲ್ಲ. ಹೀಗಾಗಿ ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ತೆರೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಜಾತಿ ಆಧಾರದ ಮೇಲೆ ಸೌಲಭ್ಯ ವಿತರಣೆ ಮಾಡುವುದನ್ನು ನಿಲ್ಲಿಸಿ ಆರ್ಥಿಕ ಪರಿಸ್ಥಿತಿಯ ಆಧಾರದ ಮೇಲೆ ಸವಲತ್ತುಗಳನ್ನು ವಿತರಿಸಲು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸುಶ್ಮಿತಾ ದೇವ್, ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಮಾಜಿ ಸಚಿವ ಸಿ.ಎಚ್. ವಿಜಯಶಂಕರ್, ಮೇಯರ್ ಪುಷ್ಪಲತಾ ಜಗನ್ನಾಥ್ ಇದ್ದರು.
==============

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....