More

  ಎಸ್‌ಬಿಆರ್‌ಆರ್ ಮಹಾಜನ ಕಾಲೇಜು ತಂಡ ಚಾಂಪಿಯನ್

  ಮೈಸೂರು: ಉತ್ತಮ ಪ್ರದರ್ಶನ ನೀಡಿದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು ತಂಡ ಮೈಸೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಕಬಡ್ಡಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.

  ಜಯಲಕ್ಷ್ಮೀಪುರಂನ ಮಹಾಜನ ವಿದ್ಯಾಸಂಸ್ಥೆಯ ಜಗದೀಶ್ ಪ್ರಸಾದ್ ಕ್ರೀಡಾಂಗಣದಲ್ಲಿ ಶುಕ್ರವಾರ ಫೈನಲ್ ಪಂದ್ಯದಲ್ಲಿ ವಿದ್ಯಾ ವಿಕಾಸ್ ಪ್ರಥಮ ದರ್ಜೆ ಕಾಲೇಜು ವಿರುದ್ಧ 40-32 ಅಂಕಗಳಿಂದ ಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಮಂಡ್ಯ ಪ್ರಥಮ ದರ್ಜೆ ಕಾಲೇಜು ವಿರುದ್ಧ ಚನ್ನರಾಯಪಟ್ಟಣದ ಆದಿಚುಂಚನಗಿರಿ ಕಾಲೇಜು ತಂಡ ಜಯ ಸಾಧಿಸಿತು.

  ವಿಜೇತ ತಂಡಗಳಿಗೆ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ರಕ್ಷಿತ್ ಪೂಜಾರಿ ಬಹುಮಾನ ವಿತರಿಸಿದರು. ಮಹಾಜನ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ವೆಂಕಟರಾಮು, ಶೈಕ್ಷಣಿಕ ಸಲಹೆಗಾರ ಡಾ.ಎಸ್.ಆರ್.ರಮೇಶ್, ಉಪ ಪ್ರಾಂಶುಪಾಲರಾದ ಬಿ.ಆರ್.ಜಯಕುಮಾರಿ, ದೈಹಿಕ ಶಿಕ್ಷಣ ವಿಭಾಗದ ಸಂಚಾಲಕ ಡಾ.ಎಚ್.ಎನ್.ಭಾಸ್ಕರ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts