22.8 C
Bengaluru
Saturday, January 18, 2020

ಕಡಕೊಳ ಟೋಲ್ ಬಳಿ ಗ್ರಾಮಸ್ಥರ ಪ್ರತಿಭಟನೆ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಮೈಸೂರು: ನಂಜನಗೂಡು ರಸ್ತೆಯ ಕಡಕೊಳ ಬಳಿ ನಿರ್ಮಿಸಿರುವ ಟೋಲ್‌ಗೇಟ್‌ನಲ್ಲಿ ಗ್ರಾಮಸ್ಥರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಸೋಮವಾರ ಟೋಲ್‌ಗೇಟ್ ಬಳಿ ಪ್ರತಿಭಟನೆ ನಡೆಸಿದರು.

ಕನ್ನಡ ಗೆಳೆಯರ ಬಳಗ, ರೈತ ಸಂಘ ಸೇರಿದಂತೆ ಇನ್ನಿತರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಟೋಲ್ ಶುಲ್ಕ ಪಡೆದುಕೊಳ್ಳಬಾರದು ಎಂದು ಒತ್ತಾಯಿಸಿದರು.

ಟೋಲ್‌ನ ಅಕ್ಕ ಪಕ್ಕದ ಗ್ರಾಮದ ಜನರು ಕೆಲಸ, ಜಮೀನು, ಆಸ್ಪತ್ರೆ, ಬ್ಯಾಂಕ್ ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ರಸ್ತೆಯಲ್ಲಿ ಹಲವು ಬಾರಿ ಸಂಚರಿಸಬೇಕಾಗುತ್ತದೆ. ಈ ವೇಳೆ ಹೋದಾಗಲೆಲ್ಲಾ ಟೋಲ್ ಶುಲ್ಕ ಕಟ್ಟಲು ಗ್ರಾಮಸ್ಥರಿಗೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಟೋಲ್ ಶುಲ್ಕ ವಿಧಿಸಬಾರದು ಎಂದು ಒತ್ತಾಯಿಸಿದರು.

ಟೋಲ್ ಕೇಂದ್ರದಲ್ಲಿದ್ದ ಜಾವೀದ್ ಅವರನ್ನು ಸುತ್ತುವರಿದ ಪ್ರತಿಭಟನಾಕಾರರು, ಹೊರ ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಟೋಲ್‌ಗಳಲ್ಲಿ ಅಕ್ಕ ಪಕ್ಕದ ಗ್ರಾಮಸ್ಥರಿಗೆ ಯಾವುದೇ ಟೋಲ್ ಶುಲ್ಕ ಪಡೆದುಕೊಳ್ಳುತ್ತಿಲ್ಲ. ಅದೇ ಮಾದರಿ ತಕ್ಷಣದಿಂದಲೇ ನಮಗೂ ಶುಲ್ಕ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

ಈ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಟೋಲ್ ಅಧಿಕಾರಿಗಳು ಭರವಸೆ ನೀಡಿದರೂ ತಕ್ಷಣವೇ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು, ಒಂದೆರಡು ದಿನಗಳಲ್ಲಿ ಟೋಲ್ ಹಿರಿಯ ಅಧಿಕಾರಿಗಳ ಸಭೆ ಕರೆದು ಗ್ರಾಮಸ್ಥರ ಮುಂದೆ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...