23.9 C
Bangalore
Friday, December 6, 2019

ಅಸ್ವಸ್ಥರಲ್ಲಿ ಮಹಿಳೆಯರೇ ಹೆಚ್ಚು

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ದೇವಾಲಯದ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಅಸ್ವಸ್ಥಗೊಂಡವರಲ್ಲಿ ಮಹಿಳೆಯರೇ ಹೆಚ್ಚು.

ಅಸ್ವಸ್ಥಗೊಂಡ 82 ಜನರನ್ನು ಘಟನಾ ಸ್ಥಳದಿಂದ ಮೈಸೂರಿಗೆ ಕರೆ ತಂದು ಒಟ್ಟು 9 ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಈ ಪೈಕಿ ಪುರುಷರು 23, ಮಹಿಳೆಯರು 50 ಮತ್ತು ಮಕ್ಕಳು 9 ಇದ್ದಾರೆ. ಇದರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ.

ಇಡೀ ಪ್ರಕರಣದ ಅಸ್ವಸ್ಥರಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿದ್ದಾರೆ. ಇಲ್ಲಿ 28 ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. 10 ಪುರುಷರು, 16 ಮಹಿಳೆಯರು ಮತ್ತು 2 ಮಕ್ಕಳು ದಾಖಲಾಗಿದ್ದಾರೆ.

ಉಳಿದಂತೆ ಖಾಸಗಿ ಆಸ್ಪತ್ರೆಗಳಾದ ಜೆಎಸ್‌ಎಸ್ 13, ಅಪೋಲೋ 13, ಕೊಲಂಬಿಯಾ ಏಷಿಯಾ 5, ಸುಯೋಗ 14, ಶಾಂತವೀರ ಗೋಪಾಲಗೌಡ 2, ಕಾವೇರಿ 10, ಬೃಂದಾವನ 4, ಡಿಆರ್‌ಎಂನಲ್ಲಿ 4 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಯೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ 8 ಮಕ್ಕಳಿದ್ದಾರೆ. ಇವರಲ್ಲಿ 4 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿದೆ. ಒಬ್ಬ ರೋಗಿಯ ಸ್ಥಿತಿ ಗಂಭೀರವಾಗಿದೆ. ಇನ್ನಿತರ ರೋಗಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ರೋಗಿಗಳ ಕುಟುಂಬದವರಿಗೆ ಆಸ್ಪತ್ರೆ ವತಿಯಿಂದ ಉಚಿತವಾಗಿ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ.

ಬಿಜಿಎಸ್ ಅಪೋಲೋ ಆಸ್ಪತ್ರೆಯಲ್ಲಿ ಒಬ್ಬ ರೋಗಿಯ ಸ್ಥಿತಿ ಚಿಂತಾಜನಕವಾಗಿದೆ. 6 ರೋಗಿಗಳಿಗೆ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ. ಮೇಲ್ವಿಚಾರಣೆಯಲ್ಲಿ 6 ರೋಗಿಗಳಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಆಕ್ರಂದನ: ಮೈಸೂರು: ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾಲಮ್ಮ, ಮುರುಗೇಶ್ವರಿ ಮೃತಪಟ್ಟ ಸುದ್ದಿ ತಿಳಿದ ಸಂಬಂಧಿಕರು ಅಪೋಲೋ ಆಸ್ಪತ್ರೆಯಲ್ಲಿ ತಲೆ ಚಚ್ಚಿಕೊಂಡು ರೋಧಿಸುತ್ತಿದ್ದರು. ವಿಷಯ ತಿಳಿದು ಇಲ್ಲಿಗೆ ಆಗಮಿಸಿದ ಸಚಿವ ಜಿ.ಟಿ.ದೇವೇಗೌಡ, ಸಂಸದ ಆರ್.ಧ್ರುವನಾರಾಯಣ್ ಅವರ ಕಾಲಿಗೆ ಬಿದ್ದು ಗಳಗಳನೆ ಅತ್ತರು. ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸಚಿವ ಜಿಟಿಡಿ ವೈಯಕ್ತಿಕವಾಗಿ ತಲಾ 10 ಸಾವಿರ ರೂ. ನೆರವು ನೀಡಿದರು.

ಒಳಗೆ ಬಿಡಿ: ನಮ್ಮವರನ್ನು ನೋಡಲು ಆಸ್ಪತ್ರೆ ಒಳಗೆ ಹೋಗಲು ಬಿಡಿ ಎಂದು ಅಸ್ವಸ್ಥರ ಕುಟುಂಬಸ್ಥರು ದುಂಬಾಲು ಬಿದ್ದಿದ್ದರು. ‘ನಮ್ಮವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರೋದಷ್ಟೇ. ಯಾರನ್ನೂ ನೋಡಲು ಒಳಗೆ ಬಿಡುತ್ತಿಲ್ಲ. ಅಸ್ವಸ್ಥಗೊಂಡವರು ಹೇಗಿದ್ದಾರೆ. ಅವರನ್ನು ಸರಿಯಾಗಿ ನೋಡಿಕೊಳ್ತಿದ್ದಾರೋ ಏನೋ ನಮಗೆ ಗೊತ್ತಿಲ್ಲ. ನಾವು ಒಳಗೆಡೆ ಹೋಗಿ ನೋಡಿಕೊಂಡು ಬಂದು, ಹೊರಗಡೆ ಇರೋರಿಗೆ ಧೈರ್ಯ ಹೇಳ್ತೀವಿ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವವರನ್ನು ನೋಡಲು ಬಿಡಿ’ ಎಂದು ಆಸ್ಪತ್ರೆ ಸಿಬ್ಬಂದಿ ಮುಂದೆ ಗೋಳಾಡಿದರು.

ಗುರುತು ಪತ್ತೆ: ಸುಳುವಾಡಿ ಗ್ರಾಮದಲ್ಲಿ ವಿಷಯುಕ್ತ ಪ್ರಸಾದ ಸೇವನೆ ಬಳಿಕ ವೃದ್ಧರೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದರು. ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗುರುತು ಪತ್ತೆಯಾಗಿರಲಿಲ್ಲ. ಭಾನುವಾರ ಮಧ್ಯಾಹ್ನ ಅವರಿಗೆ ಪ್ರಜ್ಞೆ ಬಂದಿದೆ. ಅವರು ಮೀಸೆ ಮಾದಯ್ಯ(70 ವರ್ಷ) ಎಂದು ತಿಳಿದುಬಂದಿದೆ. ಇವರು ತಮಿಳನಾಡು ಮೂಲದವರು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...