21.7 C
Bengaluru
Tuesday, January 21, 2020

ಶೈಕ್ಷಣಿಕ ಅರ್ಹತೆ ಏರಿಕೆ ಖಂಡಿಸಿ ಪ್ರತಿಭಟನೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮೈಸೂರು: ಗುತ್ತಿಗೆ ಪದ್ಧತಿ ರದ್ದು ಸೇರಿ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಆಗ್ರಹಿಸಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿರುವ ಪೌರಕಾರ್ಮಿಕರು ನಗರಪಾಲಿಕೆ ಮುಂಭಾಗ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ಕೆಲಸ ಸ್ಥಗಿತಗೊಳಿಸಿರುವ ಸಿಬ್ಬಂದಿ ಧರಣಿ ಆರಂಭಿಸಿದ್ದು, ಮೂರು ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ದಸರಾ ಕಾರ್ಯ ಬಹಿಷ್ಕರಿಸುವುದಲ್ಲದೇ ಒಳಚರಂಡಿ ಬಂದ್ ಮಾಡುವುದಾಗಿ ಎಚ್ಚರಿಸಿದರು.

ಸಂಘದ ರಾಜಾಧ್ಯಕ್ಷ ನಾರಾಯಣ ಮಾತನಾಡಿ, ಸರ್ಕಾರದ ಆದೇಶದಂತೆ ಕೂಡಲೇ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಸ್ಥಳೀಯ ಸಂಸ್ಥೆಗಳಿಂದಲೇ ನೇರವಾಗಿ ವೇತನ ನೀಡಬೇಕು, ಒಳಚರಂಡಿ, ನೀರು ಸರಬರಾಜು ವಿಭಾಗದಲ್ಲಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರನ್ನು ಪೌರ ಕಾರ್ಮಿಕರೆಂದೇ ಪರಿಗಣಿಸಬೇಕು, ಮೂರು ವರ್ಷಗಳ ಹಿಂದೆಯೇ ಬೆಳಗಿನ ಉಪಾಹಾರಕ್ಕಾಗಿ 20 ರೂ. ನೀಡುವ ಆದೇಶ ನೀಡಿದ್ದರೂ ಇನ್ನು ಜಾರಿಗೊಂಡಿಲ್ಲ. ಹಾಗಾಗಿ ತಕ್ಷಣ ಮೂರು ವರ್ಷಗಳ ಬಾಕಿಯನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಒಂದು ವರ್ಷಕ್ಕೆ 21 ದಿನಗಳ ವೇತನ ನೀಡುತ್ತಿದ್ದು, ಇದನ್ನು ಪೊಲೀಸ್ ಇಲಾಖೆಗೆ ನೀಡುವ 30 ದಿನಗಳ ವೇತನದಂತೆ ನೀಡಬೇಕು. 700 ಜನಕ್ಕೆ ಒಬ್ಬ ಪೌರಕಾರ್ಮಿಕ ಎನ್ನುವ ಆದೇಶ ತಿದ್ದುಪಡಿ ಮಾಡಿ 500 ಜನರಿಗೆ ಒಬ್ಬ ಪೌರಕಾರ್ಮಿಕ ಎಂದು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪೌರಕಾರ್ಮಿಕರ ಬೇಡಿಕೆ ಈಡೇರಿಸಿ ಆದೇಶ ಹೊರಡಿಸಿದ್ದರೂ ಅದನ್ನು ಸ್ಥಳೀಯ ಸಂಸ್ಥೆಗಳು ಇನ್ನು ಈಡೇರಿಸಿಲ್ಲ. ಹಲವು ಬಾರಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ದೂರಿದರು.

ಪ್ರತಿ ವರ್ಷ ದಸರಾದಲ್ಲಿ ಕೇವಲ ಆಶ್ವಾಸನೆ ನೀಡಲಾಗುತ್ತಿದ್ದು, ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಈ ಬಾರಿ ನಮ್ಮ ಬೇಡಿಕೆ ಈಡೇರಿಕೆ ಆದೇಶವಾಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ. ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸುವುದರ ಜತೆಗೆ ಜಂಬೂ ಸವಾರಿ ನಡೆಯುವ ದಿನ ನಗರದ ಮೆರವಣಿಗೆ ತೆರಳುವ ಮಾರ್ಗದ ಒಳಚರಂಡಿ ಬಂದ್ ಮಾಡುವುದಾಗಿ ಎಚ್ಚರಿಸಿದರು.

ಸಂಘದ ಮುಖಂಡರಾದ ಎನ್. ಮಾರಾ, ನಾಗರಾಜು, ಮಂಚಯ್ಯ, ಶ್ರೀನಿವಾಸ್, ಎನ್. ನರಸಿಂಹ, ಶಿವಣ್ಣ, ಎನ್. ರಾಜು, ಕುಮಾರಸ್ವಾಮಿ, ಹನುಮಂತ ಇತರರು ಹಾಜರಿದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...