ಶ್ರೀಕಂಠದತ್ತ ಒಡೆಯರ್ ಜನ್ಮ ದಿನಾಚರಣೆ

ಮೈಸೂರು: ಶ್ರೀ ನಾಲ್ವಡಿ ಫೌಂಡೇಷನ್, ರೋಟರಿ ಮೈಸೂರು ಪ್ಯಾಲೆಸ್ ಸಂಯುಕ್ತಾಶ್ರಯದಲ್ಲಿ ಬುಧವಾರ ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 66ನೇ ಜನ್ಮದಿನವನ್ನು ಆಚರಿಸಲಾಯಿತು.
ಎಐಸಿಸಿ ಮಾಜಿ ಕಾರ್ಯದರ್ಶಿ ಎಂ.ಎನ್.ಸೂರಜ್ ಹೆಗ್ಡೆ ಮಾತನಾಡಿ, ಸ್ವಾತಂತ್ರ್ಯ ಬರುವ ಮುಂಚಿತವಾಗಿಯೇ ದೇಶದಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆ ಅಸ್ತಿತ್ವಕ್ಕೆ ತಂದಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಅವರ ಕಾಲದಲ್ಲಿ ಅವಕಾಶ ವಂಚಿತ ಸಮುದಾಯಗಳಿಗೆ ಮೀಸಲಾತಿ ನೀಡಿ ಅವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು. ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಿದರು ಎಂದರು.
ಪತ್ರಕರ್ತ ಕೆ.ದೀಪಕ್ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪಿ.ಕಾಂತರಾಜೇ ಅರಸ್, ಕೆ.ರಘುರಾಂ, ಸೋಸಲೆ ಎಸ್.ಸಿದ್ದರಾಜು, ದೊರೆಸ್ವಾಮಿ, ಅರ್ಜುನಗೌಡ ಅವರಿಗೆ ‘ಒಡೆಯರ್ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಶ್ರೀ ಇಳೈ ಆಳ್ವಾರ್ ಸ್ವಾಮೀಜಿ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *