ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಸುಮಲತಾ ವಿಶೇಷ ಪೂಜೆ

ಮೈಸೂರು: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗುರುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಅವರು ಮಾತನಾಡಿ, ಮಂಡ್ಯದ ಸ್ವಾಭಿಮಾನ ಉಳಿಯಲು ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಹೆಚ್ಚಾಗಲಿದೆ ಎಂದು ನಂಬಿದ್ದೇನೆ. ಎಲ್ಲ ಮತದಾರರು ತಮ್ಮ ಜಿಲ್ಲೆ, ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ತಲೆಯಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದ ಅವರು, ಚುನಾವಣೆಯಿಂದ ಕ್ಷೇತ್ರದಲ್ಲಿ ಒಳ್ಳೆ ಬದಲಾವಣೆ ಆಗಲಿದೆ ಎಂದರು.
ನಾಮಪತ್ರ ಸಲ್ಲಿಕೆಗೆ ಮುನ್ನವೂ ಸುಮಲತಾ ಅಂಬರೀಷ್ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *