ಲೋಕಸಭಾ ಚುನಾವಣೆ ಪೂರ್ವಸಿದ್ಧತೆ ಸಭೆ

ತಿ.ನರಸೀಪುರ:  ಮನೆ ಮೇಲೆ ಪಕ್ಷದ ಬಾವುಟವನ್ನು ಮೊದಲು ಕಟ್ಟುವ ಮೂಲಕ ಬಿಜೆಪಿ ಪ್ರತಿಯೊಬ್ಬ ಮುಖಂಡ, ಕಾರ್ಯಕರ್ತರು ಸಂಘಟನೆಯನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ ಹೇಳಿದರು.
ಪಟ್ಟಣದ ವಿವೇಕಾನಂದನಗರದ ವೀರಶೈವ ವಿದ್ಯಾರ್ಥಿನಿಲಯದಲ್ಲಿ ಲೋಕಸಭಾ ಚುನಾವಣೆ ಪೂರ್ವಸಿದ್ಧತೆ ಸಭೆಯಲ್ಲಿ ಕ್ಷೇತ್ರದ ಕಾರ್ಯಕರರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕಾರ್ಯಕರ್ತರು, ಮುಖಂಡರು ಮತದಾರರ ಜನರ ಮನವೊಲಿಸಿ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಬೇಕೆಂದು ಸಲಹೆ ನೀಡಿದರು.
ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿರುವುದರಿಂದ ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಮಲದ ಬಾವುಟ ಹಾರಲೇಬೇಕು. ಕಾಂಗ್ರೆಸ್‌ನಿಂದ ಆಯ್ಕೆಗೊಂಡಿರುವ ಸಂಸದರು ಬಲಿಷ್ಠವಾಗಿ ಬೆಳೆದಿರುವುದರಿಂದ ಅವರನ್ನು ಮಣಿಸುವುದಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸುರೇಶ್ ಬಾಬು, ಬಿಜೆಪಿ ಕಾರ್ಯಕಾರಿಣಿ ಬಿಜೆಪಿ ಕ್ಷೇತ್ರಾಧ್ಯಕ್ಷ ಎಚ್.ಎಂ.ಪರಶಿವಮೂರ್ತಿ, ವರುಣ ಹಿರಿಯ ಮುಖಂಡ ತೋಟದಪ್ಪ ಬಸವರಾಜು, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರಸನ್ನ ಎಸ್.ಗೌಡ, ಮೈಮುಲ್ ಮಾಜಿ ಅಧ್ಯಕ್ಷ ಸಿ.ಓಂಪ್ರಕಾಶ್, ಜಿಪಂ ಸದಸ್ಯೆ ಮಂಗಳಾ ಸೋಮಶೇಖರ್, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಪಿ.ನಟರಾಜು, ನಿರ್ದೇಶಕ ಎಂ.ಎಂ.ಜಯಣ್ಣ, ಪುರಸಭೆ ಸದಸ್ಯ ಎಸ್.ಕೆ.ಕಿರಣ, ಗ್ರಾಪಂ ಮಾಜಿ ಅಧ್ಯಕ್ಷರಾದ ಬಿ.ವೀರಭದ್ರಪ್ಪ ಇದ್ದರು.

Leave a Reply

Your email address will not be published. Required fields are marked *