More

    ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ಗೆ ಮೈಸೂರು ವಿವಿ ತಂಡ

    ಮೈಸೂರು: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2023-24ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿವಿ ತಂಡ ಭಾಗಿಯಾಗಿದೆ.

    ಈ ಸಂಬಂಧ ವಿವಿಯ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಮಾ.21 ರಿಂದ 24ರವರೆಗೆ ಪಂದ್ಯಾವಳಿ ನಡೆಯಲಿದ್ದು, ಜೆ.ಟಿ.ಪುಷ್ಪ, ಆರ್.ತೇಜಸ್ವಿನಿ, ಎಸ್.ಜಯಶ್ರೀ, ಪ್ರಿಯಾಂಕಾ, ಪಲ್ಲವಿ, ಗಾಯತ್ರಿ, ರಶ್ಮಿ, ನಿಮಿತ್ ಯಾದವ್, ಟಿ.ಎಸ್.ಸಿಂಚನಾ, ಪೂರ್ಣಿಮಾ ತಂಡದಲ್ಲಿದ್ದಾರೆ.

    ತರಬೇತುದಾರ ಮೋಹನ್ ಕುಮಾರ್, ವ್ಯವಸ್ಥಾಪಕಿ ಜೆ.ಎಸ್.ಅಶ್ವಿನಿ ಜತೆ ತಂಡ ಪಂದ್ಯಾವಳಿಯಲ್ಲಿ ಭಾಗಿಯಾಗಿದೆ ಎಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts