ಮೈಸೂರು ವಿವಿ ಅಂತರ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ

 

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ದೊರೆಯಿತು.

ವಿವಿಯ ಜಿಮ್ನಾಷಿಯಂ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಲಪತಿಗಳ ವಿಶೇಷಾಧಿಕಾರಿ ಡಾ.ಎಚ್.ಕೆ.ಚೇತನ್ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭ ಕೋರಿದರು.

ಪ್ರಾಧ್ಯಾಪಕ ಪ್ರೊ.ಡಿ.ಎಸ್.ಗುರು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣ ಇದ್ದರು.

ಸೆ.20 ರವರೆಗೆ ಕುಸ್ತಿ, ಈಜು, ಯೋಗಾಸನ, ಕರಾಟೆ, ಭಾರ ಎತ್ತುವ ಹಾಗೂ ದೇಹದಾಢ್ಯ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *