

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದರು.
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಗುರುವಾರ ಸುದ್ದಿಗಾರರ ಜತೆ ಮಾತನಾಡಿದರು.
ಮೈಸೂರಿನ ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸಿಲಿಂಡರ್ ಸ್ಫೋಟ: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.(ಪ್ರಕಟಣೆ)
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.