More

    ಕಾಡುತ್ತಿದೆ ಕರೋನಾ ವೈರಸ್ ಆತಂಕ

    ಬೆಂಗಳೂರು: ಚೀನಾ ಸೇರಿ ‘ಕರೋನಾ ವೈರಸ್’ ವರದಿಯಾಗಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

    ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಿಚಕ್ಷಣಾ ದಳ ನಿಯೋಜಿಸುವ ಮೂಲಕ ಅಂತಹ ದೇಶಗಳಿಂದ ಆಗಮಿಸುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

    ಸಾಮಾನ್ಯವಾಗಿ ಶಂಕಿತ ರೋಗಿಗಳಿಗೆ ತೀವ್ರ ಜ್ವರ, ತಲೆನೋವು, ಮೈಕೈ ನೋವು, ಮೂಗು ಸೋರುವಿಕೆ, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡು ಬರುತ್ತವೆ. ಇದಕ್ಕೆ ಸಕಾಲದಲ್ಲಿ ಚಿಕಿತ್ಸೆ ದೊರೆಯದಿದ್ದರೆ ನ್ಯುಮೋನಿಯಾ ಮತ್ತು ಕೆಲ ಸಂದರ್ಭದಲ್ಲಿ ಸಾವು ಸಹ ಸಂಭವಿಸುವ ಸಾಧ್ಯತೆಗಳಿವೆ. ಒಂಟೆ, ಬಾವಲಿ ಮತ್ತು ಬೆಕ್ಕುಗಳು ಈ ಕರೋನ ವೈರಸ್ ವಾಹಕಗಳಾಗಿದ್ದು, ಇವುಗಳ ಜತೆಗೆ ಮನುಷ್ಯರ ಸಂಪರ್ಕ ಬೆಳೆದಾಗ ಕರೋನ ವೈರಸ್ ಹರಡುವ ಸಾಧ್ಯತೆಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts