More

    ಮೈಮರೆತು ಅನಗತ್ಯ ಸುತ್ತುತ್ತಿರುವ ಜನರು

    ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕರೊನಾ ವೈರಸ್ ಪ್ರಕರಣಗಳಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಭೀತಿಯ ಮಧ್ಯೆಯೂ ಜನರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಪಾಲಿಸದೆ ಬೇಕಾಬಿಟ್ಟಿ ಸಂಚರಿಸುತ್ತಿದ್ದಾರೆ. ಸಡಿಲಿಕೆಯನ್ನು ತೆರವು ಎಂಬಂತೆ ಭಾವಿಸಿದ್ದಾರೆ. ದೈಹಿಕ ಅಂತರ ಕಾಯ್ದುಕೊಳ್ಳಿ ಎಂದು ಅಧಿಕಾರಿಗಳು ಎಷ್ಟೇ ಹೇಳಿದರೂ ಜನರಿಗೆ ಮಾತ್ರ ಬುದ್ಧಿ ಬರುತ್ತಿಲ್ಲ. ಸರ್ಕಾರ ಲಾಕ್‌ಡೌನ್ ಸಡಿಲಿಕೆ ಮಾಡಿದ್ದೇ ತಡ ಮನಬಂದಂತೆ ತಿರುಗಾಡತೊಡಗಿದ್ದಾರೆ. ಕರೊನಾ ವೈರಸ್ ಹೆಚ್ಚು ಪ್ರಕರಣ ದಾಖಲಾದ ರಾಜ್ಯದ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ 2ನೇ ಸ್ಥಾನದಲ್ಲಿದೆ. ಆದರೂ ಲಾಕ್‌ಡೌನ್ ಸಡಿಲಿಕೆಯನ್ನು ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.

    ಬೈಕ್ ಹಾಗೂ ಕಾರು ಏರಿ ಎಲ್ಲೆಂದರಲ್ಲಿ ಸಂಚರಿಸುತ್ತಿದ್ದಾರೆ. ಗುರುವಾರ ಚನ್ನಮ್ಮ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಆಗಿತ್ತು. ಎಷ್ಟೇ ಹೇಳಿದರೂ ಕರೊನಾ ಹರಡುವಿಕೆ ತಡೆಗಟ್ಟುವುದನ್ನು ಜನರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕರೊನಾ ಹರಡುವುದನ್ನು ತಡೆಗಟ್ಟುವುದಕ್ಕಾಗಿ ಪ್ರತಿಯೊಬ್ಬರೂ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ. ಎಲ್ಲರೂ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕಿದೆ. ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸರಬೇಕು. ಕರೊನಾ ವೈರಸ್ ನಿಗ್ರಹ ಹೋರಾಟಕ್ಕೆ ಸರ್ಕಾರ ಅವಿತರ ಶ್ರಮಿಸುತ್ತಿದ್ದು, ಸಾರ್ವಜನಿಕರೂ ಕೈಜೋಡಿಸಬೇಕು ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

    ಜನರು ಅನಗತ್ಯವಾಗಿ ಸಂಚಾರ ಮಾಡುವಂತಿಲ್ಲ. ಲಾಕ್‌ಡೌನ್ ಸಡಿಲಿಕೆ ದುರುಪಯೋಗ ಮಾಡಿಕೊಳ್ಳಬಾರದು. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದರೆ ಅಗತ್ಯ ಕ್ರಮ ಜರುಗಿಸಲಾಗುವುದು.
    | ಡಾ. ಎಸ್.ಬಿ. ಬೊಮ್ಮನಹಳ್ಳಿ ಜಿಲ್ಲಾಧಿಕಾರಿ, ಬೆಳಗಾವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts