More

    ಬೆಳಗ್ಗೆಯಿಂದಲೇ ಅರಮನೆಯಲ್ಲಿ ನಡೆಯುತ್ತಿದೆ ಪೂಜಾ ಕೈಂಕರ್ಯಗಳು: ಕೆಲವೇ ಕ್ಷಣಗಳಲ್ಲಿ ನಾಡಹಬ್ಬಕ್ಕೆ ಅಧಿಕೃತ ಚಾಲನೆ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‌‌414ನೇ‌ ದಸರಾ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಇಂದು ಮುಂಜಾನೆಯಿಂದಲೇ ಭವ್ಯ ಅರಮನೆಯಲ್ಲಿ ಪೂಜಾ-ಕೈಂಕರ್ಯಗಳು ನಡೆಯುತ್ತಿವೆ. ಬೆಳಗ್ಗೆ 10.15 ರಿಂದ 10.36ಕ್ಕೆ‌ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.

    ಮೈಸೂರು ಅರಮನೆಯಲ್ಲಿ ಬೆಳಗ್ಗೆ 5.30ರಿಂದ ಪೂಜಾ ವಿಧಾನಗಳು ಆರಂಭವಾಗಿವೆ. ಬೆಳಿಗ್ಗೆ 6 ಗಂಟೆಯಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಯಿತು. ಬೆಳಗ್ಗೆ 07.05 ರಿಂದ 7.45ರ ಶುಭ ಲಗ್ನದಲ್ಲಿ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ವಾಣಿವಿಲಾಸ ಅರಮನೆಯಲ್ಲಿ ಕಂಕಣಧಾರಣೆ ಮಾಡಲಾಯಿತು.

    ಬೆ.9.45ಕ್ಕೆ ಅರಮನೆ ಸವಾರಿ ತೊಟ್ಟಿಗೆ, ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮನವಾಗಿದೆ. ಬೆ.10.15ಕ್ಕೆ ಕಳಸ‌ ಪೂಜೆ, ಸಿಂಹಾಸನ‌ ಪೂಜೆ ನಡೆಯಲಿದ್ದು, ಬೆ.11.30ರಿಂದ 11.50ರವರೆಗೆ ಸಿಂಹಾಸನವೇರಿ ಯದುವೀರ ಅವರು ಖಾಸಗಿ ದರ್ಬಾರ್ ನಡೆಸಲಿರುದ್ದಾರೆ. ಮಧ್ಯಾಹ್ನ 1.45 ರಿಂದ 02.05 ರವರೆಗೆ ತಾಯಿ ಚಾಮುಂಡೇಶ್ವರಿ ಪೋಟೋ, ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆಯಾಗಲಿದೆ. ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

    ಇದನ್ನೂ ಓದಿ: ಪಾಕ್​ ವಿರುದ್ಧದ ಗೆಲುವನ್ನು ಇಸ್ರೇಲ್​ ಅರ್ಪಿಸಿ ರಿಜ್ವಾನ್​ಗೆ ಟಾಂಗ್​ ಕೊಟ್ರಾ ಸಿರಾಜ್​? ಇಲ್ಲಿದೆ ವೈರಲ್​ ಟ್ವೀಟ್​ನ ಅಸಲಿಯತ್ತು

    ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕ, ಸಂಸದರು ಸೇರಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ. ನಾಡದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಹಂಸಲೇಖ ಅವರು ನಾಡಹಬ್ಬವನ್ನು ಉದ್ಘಾಟನೆ ಮಾಡಲಿದ್ದಾರೆ. ಇದಕ್ಕಾಗಿ ಚಾಮುಂಡಿಬೆಟ್ಟದ ಅಂಗಳವನ್ನು ಸಕಲ‌ ರೀತಿಯಲ್ಲೂ ಜಿಲ್ಲಾಡಳಿತ ಸಜ್ಜುಗೊಳಿಸಿದೆ. ದೇವಸ್ಥಾನದ ಎಡ ಭಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನೆಯೊಂದಿಗೆ ಹತ್ತು ಹಲವು ದಸರಾ ಕಾರ್ಯಕ್ರಮಕ್ಕೆ ಇಂದೇ‌ ಚಾಲನೆ ಸಿಗಲಿದೆ.

    ದಸರಾಗೆ ಸಕಲ ಸಿದ್ಧತೆ
    ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಅ.24ರವರೆಗೂ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕೈಗೊಳ್ಳಲಾಗಿದೆ. ದಸರಾ ಕಾರ್ಯಕ್ರಮಗಳು ನಡೆಯಲಿರುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮೈಸೂರು ನಗರ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಓರ್ವ ಡಿಐಜಿ, 11 ಎಸ್ಪಿ, 410 ಪೊಲೀಸ್ ಅಧಿಕಾರಿಗಳು, 3778 ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 4200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಶಸ್ತ್ರ ಪಡೆಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಗರುಡ ಪಡೆ ಸಹ ನಿಯೋಜಿಸಲಾಗಿದೆ.

    ನಾಡಿನ ಹೆಮ್ಮೆಯ ಮೈಸೂರು ದಸರಾ ಉತ್ಸವಕ್ಕೆ ಎಲ್ಲರಿಗೂ ಆತ್ಮೀಯ ಆಮಂತ್ರಣ: ಸಿಎಂ ಸಿದ್ದರಾಮಯ್ಯ

    ಊಟದ ನಂತರ ಈ ಅಭ್ಯಾಸಗಳಿದ್ದರೆ ಇಂದೇ ಬಿಟ್ಟುಬಿಡಿ… ಇಲ್ಲದಿದ್ದರೆ ಆರೋಗ್ಯಕ್ಕೆ ಹಾನಿಕಾರಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts