ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಬಲಿ

Dowry Harrasment
Published on

ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ಗರ್ಭಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿದೆ.

ಲಕ್ಷ್ಮೀ(23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ನಂಜನಗೂಡು ತಾಲೂಕಿನ ಮಂಚಳ್ಳಿ ಗ್ರಾಮದ ನಿವಾಸಿಯಾದ ಲಕ್ಷ್ಮೀ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜತೆ ಮದುವೆಯಾಗಿದ್ದರು.

ಮದುವೆ ವೇಳೆ ಲಕ್ಷ್ಮೀ ಪಾಲಕರು ವರದಕ್ಷಿಣೆಯಾಗಿ 50 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ನೀಡಿದ್ದರು. ಅಲ್ಲದೆ, ಒಂದು ನಿವೇಶನ ನೀಡಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ, ನಿವೇಶನ ನೀಡುವುದು ವಿಳಂಬವಾದ ಹಿನ್ನೆಲೆಯಲ್ಲಿ ಲಕ್ಷ್ಮೀಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಗಂಡನ ಮನೆಯವರ ನಿರಂತರ ಕಿರುಕುಳದಿಂದ ಬೇಸತ್ತು ಲಕ್ಷ್ಮೀ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net